ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಹಾಗೂ ಡಿಸಿಎಂ. 
ರಾಜ್ಯ

ಜನರ ನಿರೀಕ್ಷೆ ಈಡೇರಿಸಿಬೇಕು, ಕಾಲಮಿತಿಯೊಳಗೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಜನರ ನಿರೀಕ್ಷೆಗಳ ಈಡೇರಿಸಬೇಕಿದ್ದು, ಕಾಲಮಿತಿಯೊಳಗೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರು: ಜನರ ನಿರೀಕ್ಷೆಗಳ ಈಡೇರಿಸಬೇಕಿದ್ದು, ಕಾಲಮಿತಿಯೊಳಗೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಖಡಕ್ ಸೂಚನೆ ನೀಡಿದ್ದಾರೆ.

ಹಿರಿಯ ಐಎಎಸ್ ಅಧಿಕಾರಿಗಳೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚೊಚ್ಚಲ ಸಭೆಯನ್ನು ನಡೆಸಿದರು. ಸಭೆ ವೇಳೆ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು.

ನಾಡಿನ ಜನತೆ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಕಾಲ ಮಿತಿಯಲ್ಲಿ ಕೆಲಸ ಮಾಡಿ ಜನರ ನಿರೀಕ್ಷೆ ಈಡೇರಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯ. ನನ್ನ ರಾಜಕೀಯ ಜೀವನದಲ್ಲಿ ತಪ್ಪಿಲ್ಲದೆ ಯಾವುದೇ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಿಲ್ಲ. ನಿಮ್ಮ ತಪ್ಪಿನಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸಹಿಸಲ್ಲ ಎಂದು ಎಚ್ಚರಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಅವರು ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಅವರ ಪ್ರತಿನಿಧಿಗಳಾಗಿ ಇಲ್ಲಿಗೆ ಬಂದಿದ್ದೇವೆ. ಅವರ ಆಶೋತ್ತರಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಜನರ ನಿರೀಕ್ಷೆಗೆ ಅನುಗುಣವಾಗಿ ಎಲ್ಲರೂ ಕೆಲಸ ಮಾಡಬೇಕಾಗುತ್ತದೆ. ಜನರ ಆಶೋತ್ತರಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಅವರಿಗೆ ಸ್ಪಂದಿಸಬೇಕೆನ್ನುವ ಬಯಕೆ ನಮ್ಮ ಸರ್ಕಾರಕ್ಕಿದೆ. ಉತ್ತಮ ಸರ್ಕಾರದ ನಿರೀಕ್ಷೆ ಜನರಿಗಿದೆ. ಕ್ರಿಯಾಶೀಲ ಸರ್ಕಾರದ ಅಗತ್ಯವಿದೆ ಎಂದು ಜನ ಬಯಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿದೆ, ಭ್ರಷ್ಟಾಚಾರವಿದೆ ಎಂಬ ಭಾವನೆ ಜನರಲ್ಲಿತ್ತು. ಈ ಭಾವನೆಯನ್ನು ಹೋಗಲಾಡಿಸಲು  ಅಧಿಕಾರಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು. ಗುಣಮಟ್ಟದ ಕಾಮಗಾರಿಗಳಾಗಬೇಕು, ಕಾಲಮಿತಿಯಲ್ಲೇ ಕೆಲಸಗಳಾಗಬೇಕು. ಕಣ್ಣುಮುಚ್ಚಿ ಕೊಂಡು ಸಹಿ ಹಾಕದೇ ಜನರ ಹಣವನ್ನು ಸರಿಯಾದ ರೀತಿಯಲ್ಲಿ ವೆಚ್ಚ ಮಾಡಬೇಕು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೇ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು.

ಹಿರಿಯ ಅಧಿಕಾರಿಗಳು ನಿಯಮಗಳನ್ನು ಪಾಲಿಸಬೇಕು. ಯೋಜನೆಗಳ ಕ್ಷಿಪ್ರ ಅನುಷ್ಠಾನವಾದರೆ ಜನರಿಗೆ  ಪ್ರಯೋಜನವಾಗುತ್ತದೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆನ್ನುವುದು ಸರ್ಕಾರದ ಉದ್ದೇಶ. ಜನರ ಕಷ್ಟಗಳಿಗೆ ಸ್ಪಂದಿಸುವವರೇ ಮನುಷ್ಯರು ಎಂದು ಅರ್ಥಮಾಡಿಕೊಂಡು ತಾವೆಲ್ಲರೂ ಜನರ ನಿರೀಕ್ಷೆಗಳಿಗೆ ಸಕಾಲದಲ್ಲಿ ಸೂಕ್ತರೀತಿ ಸ್ಪಂದಿಸಬೇಕೆಂದು ಬಯಸುತ್ತೇನೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ