ಪರಮೇಶ್ವರ್ 
ರಾಜ್ಯ

ಯಾರೋ ಒಬ್ಬರು ಹೇಳಿಕೆ ಕೊಟ್ಟರೆ ಆಗಲ್ಲ; RSS, ಬಜರಂಗ ದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ, ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ, ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. 

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್‌ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ, ಅಗತ್ಯವಿದ್ದರೆ ಅವರನ್ನು ನಿಷೇಧಿಸುವ ಮಟ್ಟಕ್ಕೂ ಹೋಗುತ್ತೇವೆ ಎಂದು ಹೇಳಿದ್ದೇವು. ಅದನ್ನು ಬಿಟ್ಟರೆ ಈ ಬಗ್ಗೆ ಚರ್ಚೆ ನಡೆದಿಲ್ಲ. ಕೆಲವರು ವೈಯಕ್ತಿಕವಾಗಿ ತಮ್ಮ ಅಭಿಪ್ರಾಯವನ್ನು ಹೇಳಿರಬಹುದು ಎಂದು ಪರಮೇಶ್ವರ್ ಹೇಳಿದ್ದಾರೆ.

ಮತಾಂತರ ಮತ್ತು ಗೋಹತ್ಯೆ ತಡೆ ಕಾನೂನುಗಳನ್ನು ಹಿಂಪಡೆಯುವ ಕುರಿತು ಕೇಳಿದ ಪ್ರಶ್ನೆಗೆ, ಸಮಾಜಕ್ಕೆ ವಿರುದ್ಧವಾದ, ಸಮಾಜದಲ್ಲಿ ಶಾಂತಿ ಕದಡುವ ಎಲ್ಲವೂ, ಜನವಿರೋಧಿ, ಅದು ಶಾಸನಗಳು ಅಥವಾ ನಿಯಮಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಪೂರ್ಣ ಪ್ರಮಾಣದ ಸರ್ಕಾರ ರಚನೆಯಾಗಿಲ್ಲ. ಖಾತೆ ಹಂಚಿಕೆ ಆದ ಮೇಲೆ, ಯಾರು ಸಚಿವರಾಗುತ್ತಾರೋ ಅವರು ನಿಷೇಧ ವಿಷಯಗಳ ಬಗ್ಗೆ ಅಭ್ಯಾಸ ಮಾಡುತ್ತಾರೆ. ನಂತರ ಸಂಪುಟದಲ್ಲಿ ತೀರ್ಮಾನ ಆಗಬೇಕು. ಒಬ್ಬೊಬ್ಬರೇ ಹೇಳಿಕೆ ಕೊಟ್ಟ ತಕ್ಷಣ ತೀರ್ಮಾನ ಆಗುವುದಿಲ್ಲ ಎಂದು ಪರಮೇಶ್ವರ್‌ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT