ಸಂಗ್ರಹ ಚಿತ್ರ 
ರಾಜ್ಯ

ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸದಸ್ಯರು ಸೇರಿದಂತೆ ವಿವಿಧ ನೇಮಕಾತಿ ರದ್ದುಪಡಿಸಿ: ಸರ್ಕಾರ ಆದೇಶ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವಂತ ನೂತನ ಕಾಂಗ್ರೆಸ್ ಸರ್ಕಾರವು, ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶ್ವವಿದ್ಯಾಲಯಗಳಲ್ಲಿ ನೇಮಕ ಮಾಡಿದ್ದ ಸಿಂಡಿಕೇಟ್ ಸದಸ್ಯರು ಸೇರಿದಂತೆ ವಿವಿಧ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವಂತ ನೂತನ ಕಾಂಗ್ರೆಸ್ ಸರ್ಕಾರವು, ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶ್ವವಿದ್ಯಾಲಯಗಳಲ್ಲಿ ನೇಮಕ ಮಾಡಿದ್ದ ಸಿಂಡಿಕೇಟ್ ಸದಸ್ಯರು ಸೇರಿದಂತೆ ವಿವಿಧ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

ಆದೇಶದಲ್ಲಿ ಉನ್ನತ ಶಿಕ್ಷಣ ಅಡಿಯಲ್ಲಿ ಬರುವ ಸಾರ್ವಜನಿಕ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವಿವಿ ಅಧಿನಿಯಮ 2000 ಹಾಗೂ ಇತರೆ ಪ್ರತ್ಯೇಕ ಅಧಿನಿಯಮಗಳಡಿ ಪ್ರದತ್ತವಾದ ಅಧಿಕಾರವನ್ನು ಜಲಾಯಿಸಿ, ಕರ್ನಾಟಕ ಸರ್ಕಾರವು ಈ ಹಿಂದೆ ದಿನಾಂಕ 22-05-2023ರವರೆಗೆ ವಿವಿಧ ಸಾರ್ವಜನಿಕ ವಿಶ್ವವಿದ್ಯಾಲಯಗಳ ಸಿಂಡಿಕೇಟ್, ಕಾರ್ಯಕಾರಿ ಪರಿಷತ್, ಸಮಿತಿ, ವ್ಯವಸ್ಥಾಪನಾ ಮಂಡಳಿ, ಪ್ರಶಾಸನ ಸಭೆ, ವಿದ್ಯಾ ವಿಷಯಕ ಪರಿಷತ್ ಮತ್ತು ಪ್ರತಿಕ್ಷಣ ಪರಿಷತ್ತು, ಪ್ರಾಧಿಕಾರಿಗಳಿಗೆ ಮಾಡಿರುವ ಎಲ್ಲಾ ಅಧಿಕಾರೇತರ ಸದಸ್ಯರ ನಾಮ ನಿರ್ದೇಶನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಮಾಡಿರುವ ಎಲ್ಲಾ ಅಧಿಕಾರೇತರ ಸದಸ್ಯರ ನಾಮನಿರ್ದೇಶನಗಳನ್ನು, ಸಾರ್ವಜನಿಕ ವಿಶ್ವರಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿರುವ ಅಧ್ಯಯನ ಪೀಠಗಳಿಗೆ ಮಾಡಿರುವ ಎಲ್ಲಾ ಅಧಿಕಾರೇತರ ಸದಸ್ಯರ ನಾಮನಿರ್ದೇಶನಗಳನ್ನು ಹಾಗೂ ಉನ್ನತ ಶಿಕ್ಷಣ ಇಲಾಖೆ ಅಡಿ ಬರುವ ಖಾಸಗಿ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಪ್ರಬಂಧಕ ಮಂಡಳಿಗಳಿಗೆ ಮಾಡಿರುವ ಎಲ್ಲಾ ಅಧಿಕಾರೇತರ ಸದಸ್ಯರ ನಾಮನಿರ್ದೇಶನಗಳನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ