ಸಂಗ್ರಹ ಚಿತ್ರ 
ರಾಜ್ಯ

ರಾಯಚೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.

ರಾಯಚೂರು: ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.

ನೀರು ಸರಬರಾಜು ಮಾಡುವ ಪೈಪ್ ಲೈನ್‌ಗೆ ಚರಂಡಿ ನೀರು ಸೇರುತ್ತಿದ್ದು, ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆಂದು ತಿಳಿದುಬಂದಿದೆ.

ಇದರಂತೆ ಇಂದು 5 ವರ್ಷದ ಬಾಲಕ ಹನುಮೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆಂದು ವರದಿಗಳು ತಿಳಿಸಿವೆ.

ಕಲುಷಿತ ನೀರು ಸೇವನೆಯಿಂದಾಗಿ ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ರಾಯಚೂರಿನ ರಿಮ್ಸ್, ಅರಕೇರಾ, ದೇವದುರ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಸುದ್ದಿ ತಿಳಿಯುತ್ತಿದ್ದಂತಯೇ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು ಅಗತ್ಯ ವೈದ್ಯಕೀಯ ಸಲಕರಣೆ, ಔಷಧಿ ವ್ಯವಸ್ಥೆಗಳನ್ನು ಮಾಡುತ್ತಿದ್ದಾರಂದು ವರದಿಗಳು ತಿಳಿಸಿವೆ,

ಸದ್ಯ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು,  ಗ್ರಾಮದ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT