ಪ್ರಾತಿನಿಧಿಕ ಚಿತ್ರ 
ರಾಜ್ಯ

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಅಸ್ವಸ್ಥರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಮತ್ತು ಅರಕೇರಾ ಮತ್ತು ದೇವದುರ್ಗದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಪೊಲೀಸರು ಕೂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಕುಡಿಯುವ ನೀರಿಗೆ ತ್ಯಾಜ್ಯ ನೀರು ಸೇರಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

2022ರ ಜೂನ್‌ನಲ್ಲಿ ರಾಯಚೂರು ಪಟ್ಟಣದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮೂವರು ಸಾವಿಗೀಡಾಗಿದ್ದರು ಮತ್ತು 23 ಮಕ್ಕಳು ಸೇರಿದಂತೆ 60ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲುಷಿತ ನೀರು ಸೇವಿಸಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು. 

ರಾಯಚೂರು ಜಿಲ್ಲೆ ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!