ಯುಪಿಎಸ್ ಸಿ ಪರೀಕ್ಷೆ: ಭಾನುವಾರ ಬೆಳಿಗ್ಗೆ 6 ರಿಂದಲೇ ಮೆಟ್ರೋ ರೈಲುಗಳ ಸಂಚಾರ
ಮೇ 28 ರಂದು ಭಾನುವಾರ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿರುವುದರಿಂದ ಅಂದು ಮೆಟ್ರೋ ರೈಲುಗಳ ಸಂಚಾರ ಬೆಳಿಗೆ 6 ಗಂಟೆಯಿಂದಲೇ ಪ್ರಾರಂಭವಾಗಲಿವೆ.
ಬೆಂಗಳೂರು: ಮೇ 28 ರಂದು ಭಾನುವಾರ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿರುವುದರಿಂದ ಅಂದು ಮೆಟ್ರೋ ರೈಲುಗಳ ಸಂಚಾರ ಬೆಳಿಗೆ 6 ಗಂಟೆಯಿಂದಲೇ ಪ್ರಾರಂಭವಾಗಲಿವೆ. ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ರೈಲುಗಳ ಸಂಚಾರ ಆರಂಭವಾಗುತಿತ್ತು. ಆದರೆ, ಪರೀಕ್ಷೆ ಹಿನ್ನೆಲೆಯಲ್ಲಿ ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರವನ್ನು ಬಿಎಂಆರ್ ಸಿಎಲ್ ಆರಂಭಿಸಲು ನಿರ್ಧರಿಸಿದೆ.
ಈ ಕುರಿತು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರವನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೈಯಪ್ಪನಹಳ್ಳಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿ, ಕೆ.ಆರ್. ಪುರ ಮತ್ತು ವೈಟ್ ಫೀಲ್ಡ್ ನಿಲ್ದಾಣಗಳಿಂದ ಮೊದಲ ರೈಲುಗಳು ಬೆಳಿಗ್ಗೆ 6 ಗಂಟೆಗೆ ಹೊರಡಲಿವೆ ಎಂದು ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.