ಪುತ್ರ ಮೃಣಾಲ್ ಜೊತೆ ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಡಬಲ್ ಗುಡ್ ನ್ಯೂಸ್: ಮಂತ್ರಿಗಿರಿ ಜೊತೆಗೆ ಮನೆಗೆ ಮೊಮ್ಮಗಳ ಆಗಮನ!

ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಪಾಲಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದ್ದು, ಮನೆಗೆ ಮೊಮ್ಮಗಳು ‘ಮಹಾಲಕ್ಷ್ಮೀ ಯ ಆಗಮನವಾಗಿದೆ.

ಬೆಳಗಾವಿ: ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಪಾಲಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದ್ದು, ಮನೆಗೆ ಮೊಮ್ಮಗಳು ‘ಮಹಾಲಕ್ಷ್ಮೀ ಯ ಆಗಮನವಾಗಿದೆ.

ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಪಕ್ಷ​ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಗದ್ದುಗೆಗೆ ಏರಿದ್ದಾರೆ. ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಗೆ ಸಚಿವ ಸ್ಥಾನ ಒದಗಿ ಬಂದಿದೆ. ಪ್ರಮಾಣವಚನ ಸ್ವೀಕಾರ ಖುಷಿಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇದೀಗ ಮತ್ತೊಂದು ಗುಡ್​ ನ್ಯೂಸ್​ ಸಿಕ್ಕಿದೆ.

ಸಚಿವ ಸ್ಥಾನ ದಕ್ಕಿದ ದಿನವೇ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿಯಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸೊಸೆ ಹಿತಾ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮೇ 26 ರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿನ ಜನನವಾಗಿದೆ.

ಪುತ್ರ ಮೃಣಾಲ್, ಸೊಸೆ ಹಿತಾಗೆ ಹೆಣ್ಣುಮಗು ಜನಿಸಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಖುಷ್ ಆಗಿದ್ದು, ಸಚಿವಗಿರಿ ಜೊತೆಗೆ ಮನೆಗೆ ಮಹಾಲಕ್ಷ್ಮೀ ಬಂದ ಖುಷಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬಳಿಕ ಹೆಬ್ಬಾಳ್ಕರ್ ಕುಟುಂಬ ಬೆಂಗಳೂರಿಂದ ನೇರವಾಗಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!