ರಾಜ್ಯ

ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ: ಬಿಜೆಪಿ

Manjula VN

ಬೆಂಗಳೂರು: ಪ್ರವೀಣ್ ನೆಟ್ಟಾರು ಪತ್ನಿ ಕೆಲಸ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷವೇ ಸಾಕಿ‌ ಬೆಳೆಸಿದ ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯ ಕೋಮು ದ್ವೇಷಕ್ಕೆ ಒಳಪಟ್ಟು, ಪಿಎಫ್‌ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿ.ಸಿ. ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು.

ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರೆಸಿರುವುದು ಖಂಡನೀಯ. ಈ ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆಂದು ಹೇಳಿದರು.

ಅಲ್ಲದೆ, ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯರವರ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ ಎಂದು ಟೀಕೆ ಮಾಡಿದೆ.

ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.

ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಇದರಂಚೆ ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

SCROLL FOR NEXT