ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊಪ್ಪಳ: ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭಾನುವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 29 May 2023, 2:05 pm

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭಾನುವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದಾರೆ.

ಮೃೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮೀಕಾ ಎಂದು ಗುರುತಿಸಲಾಗಿದೆ.

ಇಂಡಿಕಾ ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಂಡಿಕಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. 

Advertisement

Advertisement

ಇದನ್ನು ಓದಿ: ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು

ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement