ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬೀದರ್‌ ಮೂಲದ ಯುವಕ ಆತ್ಮಹತ್ಯೆ 

ಬೆಂಗಳೂರು ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರ ಕೊಠಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಅಭಿಷೇಕ್ (19) ಎಂಬ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ನಗರದ ಪೇಯಿಂಗ್ ಗೆಸ್ಟ್ ಕಟ್ಟಡವೊಂದರ ಕೊಠಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಅಭಿಷೇಕ್ (19) ಎಂಬ ಯುವಕ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಅಭಿಷೇಕ್ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲೆಂದು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ಮೈಕೊಲೇಔಟ್ ಬಳಿ ಇರುವ ಸಂಬಂಧಿಕರ ಮನೆಯಲ್ಲಿ ಕೆಲವು ದಿನ ಇದ್ದ ಅಭಿಷೇಕ್, ಕೆಲದಿನಗಳ ಹಿಂದಷ್ಟೇ ವಿಜಯನಗರ ಬಳಿಯ ಮಾರೇನಹಳ್ಳಿಯ ಪೇಯಿಂಗ್ ಗೆಸ್ಟ್ ವಸತಿಗೆ ಸ್ಥಳಾಂತರಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಭಿಷೇಕ್ ನಿತ್ಯವೂ ತರಬೇತಿ ಸಂಸ್ಥೆ ಹಾಗೂ ಗ್ರಂಥಾಲಯಕ್ಕೆ ಹೋಗಿ ಬರುತ್ತಿದ್ದರು. ಶನಿವಾರ ಬೆಳಿಗ್ಗೆ ಸ್ನೇಹಿತರ ಜೊತೆ ಉಪಾಹಾರ ತಿಂದ ಬಳಿಕ ಅಭಿಷೇಕ್ ಕೊಠಡಿಗೆ ಹೋಗಿದ್ದರು. ಆದರೆ, ಆತ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಲಹೊತ್ತಿನ ನಂತರ ಸ್ನೇಹಿತರು ಹಿಂತಿರುಗಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದರು.

ಎರಡು ದಿನಗಳಿಂ ದ ಅಭಿಷೇಕ್ ಮೊಬೈಲ್ ಬಳಸಿಲ್ಲ. ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ, ಪೋಷಕರಿಗೆಮಾಹಿತಿ ನೀಡಲಾಗಿದ್ದು, ಅವರು ನಗರಕ್ಕೆ ಬರುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT