ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ, ಅತ್ತೆಗೆ?: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ.

ಲಕ್ಷ್ಮೀ ಹೆಬಾಳ್ಕರ್
Vishwanath S
Updated On : 30 May 2023, 4:22 pm

ಬೆಳಗಾವಿ: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. 

ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು.

ಇದನ್ನೂ ಓದಿ: ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

Advertisement

Advertisement

ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ. ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದರು. ಇನ್ನು ನಾಳೆ ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು. 

ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement