ಹರೀಶ್ ಹಳ್ಳಿ 
ರಾಜ್ಯ

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವಿನ ಪ್ರಕರಣ ಸಿಐಡಿಗೆ ಹಸ್ತಾಂತರ

ದಾವಣಗೆರೆ ಜಿಲ್ಲೆಯಲ್ಲಿ ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕುಟುಂಬಸ್ಥರ ದೂರಿನ ಮೇರೆಗೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ.

ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕುಟುಂಬಸ್ಥರ ದೂರಿನ ಮೇರೆಗೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ. ಈ ಸಂಬಂಧ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಒಬ್ಬರನ್ನು ಇಲಾಖೆ ಅಮಾನತು ಮಾಡಿದೆ.

ಮೃತ ಹರೀಶ್ ಹಳ್ಳಿ (36) ಚನ್ನಗಿರಿ ತಾಲೂಕಿನ ಕಬ್ಬಾಳ ಗ್ರಾಮದವರಾಗಿದ್ದು, ಭೂ ವ್ಯವಹಾರ ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿದ ಆರೋಪ ಎದುರಿಸುತ್ತಿದ್ದರು. ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಪೊಲೀಸರು ಅವರನ್ನು ಗಾಂಧಿನಗರ ಠಾಣೆಗೆ ಕರೆತರುತ್ತಿದ್ದಾಗ ಈ ಘಟನೆ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಹರೀಶ್ ಅವರನ್ನು ಠಾಣೆಗೆ ಕರೆತರುತ್ತಿದ್ದ ಕಾರು ತೋಳಹುಣಸೆಯ ಮೇಲ್ಸೇತುವೆಯ ಮೇಲೆ ಹಾದು ಹೋಗುತ್ತಿದ್ದಾಗ, ಅವರು ಕಾರಿನಿಂದ ಜಿಗಿದು ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರೀಶ್‌ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊನೆಯುಸಿರೆಳೆದಿದ್ದಾರೆ.

ಚನ್ನಗಿರಿ ತಾಲೂಕಿನ ಕಬ್ಬಾಳ ಗ್ರಾಮದ ನಿವಾಸಿ ಹರೀಶ್ ಎಂಬುವರು ಆಸ್ತಿ ದಾಖಲೆ ಸೃಷ್ಟಿಸಿ ದೋಚಿರುವ ಆರೋಪ ಎದುರಿಸುತ್ತಿದ್ದರು. ಕಾಕನೂರ ಗ್ರಾಮದ ಪತ್ನಿಯ ಸ್ಥಳದಿಂದ ಈತನನ್ನು ಬಂಧಿಸಲಾಗಿದೆ.

ಪೊಲೀಸರು ಹರೀಶ್ ನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಪಿಎಸ್‌ಐ ಕೃಷ್ಣಪ್ಪ ಹಾಗೂ ಇಬ್ಬರು ಪೊಲೀಸ್ ಪೇದೆಗಳ ವಿರುದ್ಧ ಅವರ ಪತ್ನಿ ದೂರು ದಾಖಲಿಸಿದ್ದರು. ದಾವಣಗೆರೆ ಎಸ್ಪಿ ಡಾ.ಕೆ.ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!