ಪ್ರಿಯಾಂಕ್ ಖರ್ಗೆ-ಎಂಬಿ ಪಾಟೀಲ್ 
ರಾಜ್ಯ

Karnataka Cabinet: ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್​ಗೆ ಹೆಚ್ಚುವರಿ ಖಾತೆ ನೀಡಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಎಂ.ಬಿ.ಪಾಟೀಲ್ (MB Patil) ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. 

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಎಂ.ಬಿ.ಪಾಟೀಲ್ (MB Patil) ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. 

ಈ ಕುರಿತು ಸಚಿವ ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ಮಾಹಿತಿ ನೀಡಲಾಗಿದೆ. ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜೊತೆಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ ಮತ್ತು ಬಿಟಿ) ಖಾತೆ ಹಂಚಿಕೆ ಮಾಡಲಾಗಿದೆ. ಎಂಬಿ ಪಾಟೀಲ್ ಅವರಿಗೆ ಈ ಹಿಂದೆ ಮಂಜೂರು ಮಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಜೊತೆಗೆ ಹೆಚ್ಚುವರಿಯಾಗಿ ಮೂಲಸೌಕರ್ಯ ಅಭಿವೃದ್ಧಿ ಖಾತೆ ನೀಡಲಾಗಿದೆ. ಈ ಎರಡೂ ಖಾತೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದವು.

ವರದಿಗಳ ಪ್ರಕಾರ, ಖಾತೆ ಹಂಚಿಕೆಯ ಕರಡು ಪಟ್ಟಿಯಲ್ಲಿ ಐಟಿ ಮತ್ತು ಬಿಟಿಯನ್ನು ಖರ್ಗೆ ಅವರಿಗೆ ನೀಡಲಾಗಿತ್ತು. ಆದರೆ ಈ ಖಾತೆಗಾಗಿ ಪಾಟೀಲ್ ಅವರು ಲಾಬಿ ಮಾಡಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರು ಆ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಐಟಿ ಮತ್ತು ಬಿಟಿ ಖಾತೆಯನ್ನು ಪ್ರಿಯಾಂಕ್ ಖರ್ಗೆ ಅವರಿಗೇ ನೀಡಿದ್ದಾರೆ. ಸದ್ಯ ಪಾಟೀಲ್ ಅವರನ್ನು ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ.

ರಾಮಲಿಂಗಾ ರೆಡ್ಡಿ ಮತ್ತು ಕೆ.ಎಚ್.ಮುನಿಯಪ್ಪ ಅವರಂತಹ ಹಲವು ಸಚಿವರು ಖಾತೆ ಹಂಚಿಕೆ ಬಗ್ಗೆ ಅತೃಪ್ತರಾಗಿದ್ದರು. ಆದರೆ ಅವರ ಖಾತೆಗಳಲ್ಲಿ ಮುಖ್ಯಮಂತ್ರಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಶನಿವಾರ ಕರ್ನಾಟಕ ಸಚಿವ ಸಂಪುಟವನ್ನು ಭರ್ತಿ ಮಾಡಲಾಗಿತ್ತು. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಅದಾದ ಒಂದು ದಿನದ ನಂತರ ಅವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT