ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಂಗಳವಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಂಗಳವಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 4ಷ್ಟು ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಸರ್ಕಾರದ ಈ ಆದೇಶ ಸರ್ಕಾರಿ ನೌಕರರಲ್ಲಿ ಸಂತಸವನ್ನು ತಂದಿದೆ. ಈ ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಏರಿಕೆ ಮಾಡಲಾಗಿದೆ.

ನೌಕರರ ಮೂಲ ವೇತನದ ಶೇ. 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸೂಚಿಸಲಾಗಿದೆ. ಈ ಮೂಲಕ ಕಳೆದ ಐದು ತಿಂಗಳ ತುಟ್ಟಿಭತ್ಯೆಯಲ್ಲಿ ಶೇಕಡಾ 4ರಷ್ಟು ಹೆಚ್ಚಳವನ್ನು ಪಡೆಯಲಿದ್ದಾರೆ.

ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸುವಂತಿಲ್ಲ. ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ಜೀವನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಶಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ಸರ್ಕಾರ ತಿಳಿಸಿದೆ.

ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು, 2028ರ ಮೇ ತಿಂಗಳ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆ ಸಂಭಾವನೆ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT