ಸಿಎಂ ಸಿದ್ದರಾಮಯ್ಯ 
ರಾಜ್ಯ

ಹಣಕಾಸು ಇಲಾಖೆ ವಿರೋಧ?: ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ: ಗ್ಯಾರೆಂಟಿ ಯೋಜನೆ ಜಾರಿ ಖಚಿತ ಎಂದ ಸಿಎಂ ಸಿದ್ಧರಾಮಯ್ಯ

ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಬೆಂಗಳೂರು: ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಗಳು ಅತ್ಯಂತ ಮಹತ್ವದ ಸಭೆಯನ್ನು ನಡೆಸಿದರು. ನಂತರ ಮಾತನಾಡಿದ ಅವರು, ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಐದು ಗ್ಯಾರಂಟಿಗಳ ಜಾರಿ ಸಂಬಂಧ ಮತ್ತಷ್ಟು ತಯಾರಿ ಅಗತ್ಯ ಹಿನ್ನೆಲೆ ನಾಳೆಯೂ ಕೂಡ ಅಧಿಕಾರಿಗಳು, ಸಚಿವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಎಲ್ಲಾ ಗ್ಯಾರೆಂಟಿಗಳ ಜಾರಿಗೆ ಹಣಕಾಸು ಹೊಂದಿಸುವುದು ಕಷ್ಟ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಒಂದು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP