ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಪರಿಶೀಲನೆ 
ರಾಜ್ಯ

ಭ್ರಷ್ಟ ಅಧಿಕಾರಿಗಳ ಬೇಟೆ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ; ಮನೆ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ರಾಜ್ಯದಲ್ಲಿ ಮುಂದುವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿದ್ದಾರೆ. 

ಬೆಂಗಳೂರು:  ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ರಾಜ್ಯದಲ್ಲಿ ಮುಂದುವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿದ್ದಾರೆ. 

ಇಂದು ಬೆಳಗ್ಗೆ ಬೆಂಗಳೂರು, ತುಮಕೂರು ಹಾಗೂ ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಎಲ್ಲೆಲ್ಲಿ, ಯಾರ ನಿವಾಸ ಮೇಲೆ ದಾಳಿ?: ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ: ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾಂ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಕಾರ್ಯಾಚರಣೆ: ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ‌ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೆ ದಾಳಿ: ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT