ರಾಜ್ಯ

ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕತೆ ಕೂಗು: ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ

Sumana Upadhyaya

ಕಲಬುರಗಿ: ಇಂದು ನವೆಂಬರ್‌ 1, ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, 68ನೇ ಕನ್ನಡ ರಾಜ್ಯೋತ್ಸವ(Kannada Rajyotsava)ವನ್ನು ಆಚರಿಸಲಾಗುತ್ತಿದೆ. 

ಆದರೆ ಕಲಬುರಗಿಯಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆದಿದೆ. ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯು ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದೆ.

ಸಮಿತಿ ಅಧ್ಯಕ್ಷ ಎಮ್‌ಎಸ್ ಪಾಟೀಲ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ 20 ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

SCROLL FOR NEXT