ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು. 
ರಾಜ್ಯ

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕೂಲಿ ಕಾರ್ಮಿಕರ ದುರ್ಮರಣ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ

ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು.

ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದು ಬಿದ್ದಿದೆ.  ಈ ಘಟನೆಯಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಎಂಬುವವರು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಬದುಕಿಳಿದಿದ್ದಾರೆ.

ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಹೊರಗೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ವೇಳೆ ಸುಮಾರು 9 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದರು.

ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು.

ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್ ಅವರು,15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದ್ದಾರೆ.

ಈ ಘಟನೆಗೂ ಮೊದಲೇ ಸಡಿಲವಾಗಿ ಮಣ್ಣ ಹಾಕಿದ್ದರು ಎಂದು ತಿಳಿದುಬಂದಿದೆ. ನೋಡುವುದಕ್ಕೆ ಯಾರಿಗೂ ತಿಳಿಯುವುದಿಲ್ಲ. ಈ ಕಾಮಗಾರಿ ಮಾಡಲು ಪರ್ಮಿಷನ್ ತೆಗೆದುಕೊಂಡಿದ್ದಾರೋ ಇಲ್ಲವೋ ಎನ್ನುವುದು ಇನ್ನಷ್ಟೇ ಮಾಹಿತಿ ಕಲೆ ಹಾಕಬೇಕಿದೆ. ಇದು ಮನೆಯ ಮಾಲೀಕನ ನಿರ್ಲಕ್ಷ್ಯದಿಂದ ಆಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಹಾರ ಘೋಷಿಸಿದ ಸಿಎಂ
ಈ ನಡುವೆ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ರೂ. 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

SCROLL FOR NEXT