ಹಾಸನಾಂಬ ದೇಗುಲ 
ರಾಜ್ಯ

ಇಂದು ಬಾಗಿಲು ತೆಗೆಯಲಿರುವ ಹಾಸನಾಂಬೆ ದೇಗುಲ: ನಾಳೆಯಿಂದ 14 ದಿನ ಭಕ್ತರಿಗೆ ದರುಶನ ಭಾಗ್ಯ

ರಾಜಧಾನಿ ಬೆಂಗಳೂರಿನಿಂದ ಸುಮಾರು 130 ಕಿಲೋ ಮೀಟರ್ ದೂರದಲ್ಲಿರುವ ಹಾಸನಾಂಬಾ ದೇವಸ್ಥಾನವನ್ನು (Hasanamba Temple) ಇಂದು ಗುರುವಾರ ನವೆಂಬರ್ 2ರಂದು ತೆರೆಯಲಾಗಿದೆ. 

ಹಾಸನ: ರಾಜಧಾನಿ ಬೆಂಗಳೂರಿನಿಂದ ಸುಮಾರು 130 ಕಿಲೋ ಮೀಟರ್ ದೂರದಲ್ಲಿರುವ ಹಾಸನಾಂಬಾ ದೇವಸ್ಥಾನವನ್ನು (Hasanamba Temple) ಇಂದು ಗುರುವಾರ ನವೆಂಬರ್ 2ರಂದು ತೆರೆಯಲಾಗಿದೆ. 

ಇಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆಯ ದೇಗುಲದ ಬಾಗಿಲನ್ನು ತೆರೆಯಲಾಗುತ್ತದೆ. ಆದರೆ ಇಂದು ಹಾಸನಾಂಬಾ ದೇವಿಯ ದರ್ಶನ ಮಾಡಲು ಭಕ್ತರಿಗೆ ಅವಕಾಶವಿರುವುದಿಲ್ಲ, ನಾಳೆಯಿಂದ ದರ್ಶನ ಮಾಡಬಹುದಾಗಿದೆ. ಇಂದು ಹಾಸನಾಂಬೆಯ ಗರ್ಭಗುಡಿ ಸ್ವಚ್ಛತೆ, ಪೂಜೆ, ನೈವೇದ್ಯ ಪ್ರಕ್ರಿಯೆಗಳಷ್ಟೇ ನಡೆಯಲಿದೆ. ನಾಳೆ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಾಸನಾಂಬಾ ದೇವಿಯ ದರ್ಶನ ಪಡೆಯಲು ಅವಕಾಶವಿದೆ. 

ಕಳೆದ ವರ್ಷ ಗರ್ಭಗುಡಿಯಲ್ಲಿ ಹುತ್ತದೋಪಾದಿಯಲ್ಲಿರುವ ಆದಿಶಕ್ತಿಸ್ವರೂಪಿಣಿ ಹಾಸನಾಂಬೆಗೆ ಹಚ್ಚಿಟ್ಟಿದ್ದ ದೀಪವು ಆರದೆ, ಮುಡಿಸಿದ ಹೂ ಬಾಡದೆ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಭಕ್ತಾದಿಗಳು ಕಣ್ತುಂಬಿಕೊಳ್ಳುವುದು ಇಲ್ಲಿನ ವಿಶೇಷತೆಯಾಗಿದೆ. ವರ್ಷಕ್ಕೊಮ್ಮೆ ಹಾಸನಾಂಬೆ ದೇಗುಲದ ಬಾಗಿಲು ತೆರೆದು ಭಕ್ತರಿಗೆ ದರ್ಶನ ಸಿಗುವುದು ಇಲ್ಲಿನ ವಿಶೇಷತೆಯಾಗಿದೆ. 

ಇಂದಿನಿಂದ 14 ದಿನ ಹಾಸನದಲ್ಲಿ ಹಾಸನಾಂಬೆ ದೇಗುಲ ತೆರೆದಿರಲಿದ್ದು ಭಕ್ತಾದಿಗಳಿಗೆ ಅವಕಾಶವಿರುತ್ತದೆ. ಈ ಬಾರಿ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲು ಹಾಸನ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!