ಎಸ್.ಎಸ್.ಮಲ್ಲಿಕಾರ್ಜುನ್ 
ರಾಜ್ಯ

ಬರಗಾಲದಿಂದ ಈ ಬಾರಿ ವಿಶ್ವ ಕನ್ನಡ ಸಮ್ಮೇಳನ ನಡೆವ ಸಾಧ್ಯತೆಯಿಲ್ಲ; ಸರ್ಕಾರ ಅವಧಿ ಪೂರೈಸಲಿದೆ: ಎಸ್.ಎಸ್ ಮಲ್ಲಿಕಾರ್ಜುನ್

ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್​ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು  ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದಾರೆ.

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್​ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು  ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದಾರೆ.

ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ಬಿಜೆಪಿ ಸರ್ಕಾರ ಪತನದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ, ಆದರೆ ರಾಜ್ಯ ಸರ್ಕಾರ ತುಂಬಾ ಬಲಿಷ್ಠವಾಗಿದೆ ಎಂದು ಅವರು ಹೇಳಿದರು.

ದಾವಣಗೆರೆಯ ಅಭಿವೃದ್ಧಿಗೆ ನೀಲನಕ್ಷೆ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನದ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬರಗಾಲದ ಕಾರಣ ಈ ವರ್ಷ ನಡೆಸುವ ಸಾಧ್ಯತೆಯಿಲ್ಲ.

ಡಿಸೆಂಬರ್‌ನಲ್ಲಿ ನಾನು ಈ ವಿಷಯವನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಮತ್ತು ಬಜೆಟ್‌ನಲ್ಲಿ ಇದಕ್ಕಾಗಿ ಸಾಕಷ್ಟು ಹಣವನ್ನು ಮೀಸಲಿಡುವಂತೆ ನೋಡಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ  ಆಗುವುದಿಲ್ಲ ಎಂದು ದಾವಣಗೆರೆ ನಿವಾಸಿಗಳಿಗೆ ಮಲ್ಲಿಕಾರ್ಜುನ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT