ಮೆಟ್ರೋ ರೈಲು ಸಾಂದರ್ಭಿಕ ಚಿತ್ರ 
ರಾಜ್ಯ

ಭಾನುವಾರ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತ!

ನವೆಂಬರ್ 5 ಭಾನುವಾರದಂದು ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತವಾಗಲಿದೆ.ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.

ಬೆಂಗಳೂರು: ನವೆಂಬರ್ 5 ಭಾನುವಾರದಂದು ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತವಾಗಲಿದೆ.

ಹೌದು. ಅಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.

ಬೆಳಗ್ಗೆ 9 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.

ಚಲ್ಲಘಟ್ಟ ಮತ್ತು ಎಂ.ಜಿ. ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲು ಸೇವೆ ಬೆಳಗ್ಗೆ 7 ಗಂಟೆಯಿಂದಲೇ ವೇಳಾಪಟ್ಟಿ ಪ್ರಕಾರ ಪ್ರಾರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್‌ ಕುಲಕರ್ಣಿಗೆ 'ಸುಪ್ರೀಂ' ಜಾಮೀನು!

SCROLL FOR NEXT