ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವೇಗವಾಗಿ ಬಂದು ಡಿಕ್ಕಿ ಹೊಡೆದ ಲಾರಿ; ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ದುರ್ಮರಣ!

ಅತಿವೇಗದಲ್ಲಿ ಬಂದ ಟ್ರಕ್ ಹರಿದು ಏಳು ತಿಂಗಳ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಬೆಂಗಳೂರು- ಹೊಸೂರು ರಾಷ್ಟೀಯ ಹೆದ್ದಾರಿ 44 ರಲ್ಲಿನ ಬೊಮ್ಮಸಂದ್ರ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ.

ಬೆಂಗಳೂರು: ಅತಿವೇಗದಲ್ಲಿ ಬಂದ ಟ್ರಕ್ ಹರಿದು ಏಳು ತಿಂಗಳ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಬೆಂಗಳೂರು- ಹೊಸೂರು ರಾಷ್ಟೀಯ ಹೆದ್ದಾರಿ 44 ರಲ್ಲಿನ ಬೊಮ್ಮಸಂದ್ರ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಗರ್ಭಿಣಿ ಮಹಿಳೆಯ ಹೊಟ್ಟೆಯಲ್ಲಿದ್ದ ಕಂದಮ್ಮ ಕೂಡ ಅಸುನೀಗಿದೆ. ಎಂಟು ತಿಂಗಳ ಗರ್ಭಿಣಿ ರುಕಿಯಾ (28) ಹಾಗೂ ಲಕ್ಷ್ಮಮ್ಮ (50) ಮೃತ ದುರ್ದೈವಿಗಳು.

ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮೂವರು ಹೊಸೂರು-ಬೆಂಗಳೂರು ಹೆದ್ದಾರಿಯನ್ನು ದಾಟುತ್ತಿದ್ದಾಗ ಬ್ಯಾರಿಕೇಡ್ ಅಂತರವನ್ನು ದಾಟಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಮ್ಮ ವರ್ತೂರಿನಲ್ಲಿ ನೆಲೆಸಿದ್ದರು. ಇವರಿಬ್ಬರು ಅಕ್ಕಪಕ್ಕದವರಾಗಿದ್ದರಿಂದ ಲಕ್ಷ್ಮಮ್ಮ ಅವರಿಗೆ ರುಕಯ್ಯ ಅವರಿಗೆ ಪರಿಚಯವಿತ್ತು.

ಲಕ್ಷ್ಮಮ್ಮ ನಗರಕ್ಕೆ ಪರಿಚಿತಳಾಗಿದ್ದರಿಂದ ರುಕಯ್ಯ ಮತ್ತು ರಬಿಯಾ ಖಾಸಗಿ ಆಸ್ಪತ್ರೆಗೆ ಹೋಗುತ್ತಿದ್ದರು. ರಸ್ತೆ ದಾಟುತ್ತಿದ್ದಾಗ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ರುಕಿಯಾ ಹಾಗೂ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಬ್ಬಗೋಡಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಎಂಟು ತಿಂಗಳು ಗರ್ಭಿಣಿಯಾದ್ದರಿಂದ ಸ್ಕೈವಾಕ್ ಹತ್ತಲಾಗದೆ ಬಸ್ ಇಳಿದವರೇ ನೇರ ಹೆದ್ದಾರಿ ದಾಟಿ ನಾರಾಯಣ ಹೆಲ್ತ್‌ ಸಿಟಿ ಆಸ್ಪತ್ರೆಗೆ ಹೋಗಲು ಮುಂದಾಗಿದ್ದರು. ಈ ವೇಳೆ ಬೆಂಗಳೂರಿನ ಕಡೆಯಿಂದ ಅತ್ತಿಬೆಲೆ ಮಾರ್ಗವಾಗಿ ಬಂದ ಲಾರಿಯೊಂದು ಹೆದ್ದಾರಿ ದಾಟುತ್ತಿದ್ದ ಗರ್ಭಿಣಿ ಸೇರಿದಂತೆ ಜೊತೆಯಲ್ಲಿ ಬಂದಿದ್ದ ಪರಿಚಯಸ್ಥ ಮಹಿಳೆಯ ಮೇಲೆಯೂ ಲಾರಿ ಹರಿದು ಎರಡು ದೇಹಗಳು ಛಿದ್ರ ಛಿದ್ರಗೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT