ಬೆಳಗಾವಿ ಸುವರ್ಣ ಸೌಧ 
ರಾಜ್ಯ

ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆ

ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಬೆಳಗಾವಿಯ ಕರ್ನಾಟಕ ಸುವರ್ಣ ಸೌಧದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು  ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಹೇಳಿದ್ದಾರೆ.

ಹುಬ್ಬಳ್ಳಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಬೆಳಗಾವಿಯ ಕರ್ನಾಟಕ ಸುವರ್ಣ ಸೌಧದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು  ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಸಾರ್ವಜನಿಕರ ಭಾವನೆಗಳನ್ನು ಪ್ರತಿಧ್ವನಿಯಾಗಲಿದ್ದು, ಈ ಕುರಿತು ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳಲಿದೆ.
ಬಹುತೇಕ ಡಿಸೆಂಬರ್ 4 ರಿಂದ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎಂದರು. 

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಗ್ಗಟ್ಟಾಗಿ ಚರ್ಚೆ ನಡೆಸಲಿದ್ದು, ಮಂಡನೆಯಾಗಬಹುದಾದ ವಿಧೇಯಕಗಳ ಬಗ್ಗೆ ನಂತರ ತಿಳಿಯಲಿದೆ.‘ಸರ್ಕಾರ ಪ್ರಸ್ತಾಪಿಸಿರುವ ಮಸೂದೆಗಳನ್ನು ಮಂಡಿಸಲಾಗುವುದು’ ಎಂದು  ಹೇಳಿದರು.

ಮಹಾರಾಷ್ಟ್ರ ಪರ ಸಂಘಟನೆಗಳಿಂದ ಬೆಳಗಾವಿಯಲ್ಲಿ ಯಾವುದೇ ರೀತಿಯ ಅಡ್ಡಿ ಉಂಟಾದರೆ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಲು ಎಲ್ಲಾ ಸಂಘಟನೆಗಳು ಶ್ರಮಿಸಬೇಕು ಮತ್ತು ಬೆಳಗಾವಿ ಮಾದರಿಯಾಗಬೇಕು. ಅದನ್ನು ನನಸಾಗಿಸಲು ಎಲ್ಲರೂ ಸಹಕರಿಸಬೇಕು, ಬೆಳಗಾವಿಗೆ ಕೆಟ್ಟ ಹೆಸರು ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸ್ಪೀಕರ್ ಮನವಿ ಮಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT