ಜಲಾವೃತಗೊಂಡ ರಸ್ತೆ (ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರಿನಲ್ಲಿ ಮಳೆ: ಈ ಪ್ರದೇಶಗಳ ವಾಹನ ಚಾಲಕರಿಗೆ ಪೊಲೀಸರಿಂದ ಮಹತ್ವದ ಸಂಚಾರ ಸಲಹೆ...

 ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು. ರಸ್ತೆಗಳು ಜಲಾವೃತಗೊಂಡಿರುವುದರಿಂದ  ವಾಹನ ಸಂಚಾರರು ಪರದಾಡುವಂತಾಗಿದೆ. 

ಬೆಂಗಳೂರು: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು. ರಸ್ತೆಗಳು ಜಲಾವೃತಗೊಂಡಿರುವುದರಿಂದ  ವಾಹನ ಸಂಚಾರರು ಪರದಾಡುವಂತಾಗಿದೆ. 

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿರುವ ಪ್ರದೇಶಗಳ ಬಗ್ಗೆ ಮಾಹಿತಿ ನೀಡಿದ್ದು, ಆ ಮಾರ್ಗಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಾರ್ಗ ಬದಲಾವಣೆಗೆ ಸಲಹೆ ನೀಡಿದ್ದಾರೆ.

 
ಕೆ. ಆರ್ ಪುರ ಸಂಚಾರ ಠಾಣಾ ಸರಹದ್ದಿನಲ್ಲಿ ಮಳೆಯಾಗಿದ್ದು,  ಕಸ್ತೂರಿ ನಗರ ರಿಂಗ್ ರಸ್ತೆಯ ಟಿನ್ ಫ್ಯಾಕ್ಟರಿ ಕಡೆಯಿಂದ ಆರ್.ಎಂ ನಗರ ಸಿಗ್ನಲ್ ಜಂಕ್ಷನ್ ( ಹೆಬ್ಬಾಳ) ಕಡೆ ವಾಹನಗಳ ಸಂಚಾರ ನಿಧಾನಗತಿಯಲ್ಲಿರುತ್ತದೆ ಎಂದು ಸಂಚಾರ ಪೊಲೀಸ್ ಟ್ವೀಟ್ ಖಾತೆ ಮಾಹಿತಿ ನೀಡಿದೆ. 

ಇನ್ನು ಬಾಣಸವಾಡಿ ಮುಖ್ಯರಸ್ತೆಯಲ್ಲಿ (ಜೈ ಭಾರತ್ ನಗರ ಪೆಟ್ರೋಲ್ ಬಂಕ್ ಬಳಿ) ರಸ್ತೆ ಜಲಾವೃತಗೊಂಡಿದ್ದು, ನಿಧಾನಗತಿಯ ಸಂಚಾರವಿದೆ. 

ಎಂ.ಎಂ.ಟಿ ಜಂಕ್ಷನ್ ಹತ್ತಿರ ಹ್ಯಾಂಗಿಂಗ್ ಬ್ರಿಡ್ಜ್ ಮೇಲೆ KSRTC ಬಸ್ ಕೆಟ್ಟು ನಿಂತಿದ್ದು ಕೆ.ಆರ್ ಪುರ ಕಡೆ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದನ್ನು ಶೀಘ್ರದಲ್ಲೇ  ತೆರವುಗೊಳಿಸಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. 

ಇನ್ನು ವಿದ್ಯಾ ಶಿಲ್ಪ ಕೆಳಸೇತುವೆ ಸರ್ವೀಸ್ ರಸ್ತೆ ಜಲಾವೃತಗೊಂಡಿದ್ದ ಕಾರಣ ನಿಧಾನಗತಿಯ ವಾಹನಸಂಚಾರವಿದೆ. ಈ ಹಿನ್ನೆಲೆಯಲ್ಲಿ ಸಂಚಾರ ಮಾರ್ಗವನ್ನು ಕೊಗಿಲು ಜಂಕ್ಷನ್ ಕಡೆಗೆ ತಿರುಗಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT