ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಬಂಡೀಪುರದಲ್ಲಿ ಆನೆ ಸಾವು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬಂಡೀಪುರ ಅರಣ್ಯದಲ್ಲಿ ಆನೆ ‘ಅಕ್ಕಿ ರಾಜ’ ಸಾವನ್ನಪ್ಪಿರುವ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಘಳಿಗೆ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಆನೆ ‘ಅಕ್ಕಿ ರಾಜ’ ಸಾವನ್ನಪ್ಪಿರುವ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಘಳಿಗೆ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ರಾಮಾಪುರ ಆನೆ ಶಿಬಿರದಲ್ಲಿ ಆನೆ ಸಾವಿಗೆ ಆಹಾರದ ಕೊರತೆಯೇ ಕಾರಣ ಎಂದು ಕಾರ್ಯಕರ್ತ ಜೋಸೆಫ್ ಹೂವರ್ ಅವರು ದೂರು ನೀಡಿರುವುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ವರದಿ ಸಲ್ಲಿಸುವಂತೆ ನವೆಂಬರ್ 2 ರಂದು ಬರೆದು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಮೇವು ತರಲು ವಾಹನದ ಕೊರತೆ ಎದುರಾಗಿದ್ದು, ಆಹಾರದ ಕೊರತೆಯೇ ಆನೆ ಸಾವಿಗೆ ಕಾರಣವಾಗಿದೆ. ಇದಲ್ಲದೆ ಇತರ ಕಾರಣಗಳೂ ಇವೆ. ಈ ನಿರ್ಲಕ್ಷ್ಯವು ಇತರ ಶಿಬಿರದ ಆನೆಗಳ ಸಾವಿಗೆ ಕಾರಣವಾಗದಂತೆ ಖಚಿತಪಡಿಸಿಕೊಳ್ಳಲು ವಿಚಾರಣೆಯು ಸಹಾಯ ಮಾಡುತ್ತದೆ" ಎಂದು ಹೂವರ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಒಂದು ವಾರದೊಳಗೆ ಈ ಬಗ್ಗೆ ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT