ಆರೋಪಿ ಕಿರಣ್-ಪ್ರತಿಮಾ 
ರಾಜ್ಯ

ಪ್ರತಿಮಾ ಕೊಲೆ ಪ್ರಕರಣ: ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಆರೋಪಿ ಕಿರಣ್!

ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣ್ ಗೆ ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಬೆಂಗಳೂರಿನ 2ನೇ ACMM ಕೋರ್ಟ್‌ ಆದೇಶಿಸಿದೆ. 

ಬೆಂಗಳೂರು: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣ್ ಗೆ ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಬೆಂಗಳೂರಿನ 2ನೇ ACMM ಕೋರ್ಟ್‌ ಆದೇಶಿಸಿದೆ. 

ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ಇಂದು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಇನ್ನು ಆರೋಪಿಯನ್ನು 11 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಕೋರ್ಟ್ 10 ದಿನಗಳ ಕಾಲ ಕಸ್ಟಡಿಗೆ ನೀಡಿದೆ. 

ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈ ವೇಳೆ ತಾನೇ ಕೊಲೆ ಮಾಡಿರುವುದಾಗಿ ಕಿರಣ್ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಪೊಲೀಸ್ ವಿಚಾರಣೆ ವೇಳೆ ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು ಎಂದು ಹೇಳಲಾಗಿದೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾರೆ ಎಂದು ಹೇಳಿದ್ದಾರೆ. 

ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಒಬ್ಬರೇ ವಾಸಿಸುತ್ತಿದ್ದರು. ಕಳೆದ ರಾತ್ರಿ ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ