ಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ಆರೋಪಿ ಕಿರಣ್ 
ರಾಜ್ಯ

ಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ: ಕಾರು ಚಾಲಕನ ಬಂಧನ, ಕೆಲಸದಿಂದ ವಜಾಗೊಳಿಸಿದ್ದೇ ಹತ್ಯೆಗೆ ಕಾರಣ?

ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ.

ಬೆಂಗಳೂರು: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ.

ಹೌದು.. ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಸಂಭದಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ ಎಂದು ಗುರುತಿಸಲಾಗಿದೆ.  ಮೂಲಗಳ ಪ್ರಕಾರ ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅದರಲ್ಲಿ ಕಿರಣ್​ ಎಂಬಾತ ಪ್ರತಿಮಾ ಅವರ ಹಳೆ ಡ್ರೈವರ್​ ಆಗಿದ್ದನು ಎಂಬುದು ತಿಳಿದುಬಂದಿದೆ.

ಪೊಲೀಸ್ ವಿಚಾರಣೆ ವೇಳೆ ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಬಂದಿತ್ತು ಎಂದು ಹೇಳಲಾಗಿದೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿರಬಹುದು ಎಂದು ಹೇಳಲಾಗಿದ್ದು, ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಗಣಿ-ಭೂವಿಜ್ಞಾನ ಇಲಾಖೆಯ (Department of Mines and Geology) ಅಧಿಕಾರಿ ಪ್ರತಿಮಾರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರಿನ  ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರತಿಮಾ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ. ಕಳೆದ ರಾತ್ರಿ ಈ ಕೃತ್ಯ ನಡೆದಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT