ವಿಸಿ ನಾಲೆ 
ರಾಜ್ಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು, ಮಗು ಸೇರಿ ಐವರು ಜಲಸಮಾಧಿ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ಮಂಗಳವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ಜಲಸಮಾಧಿಯಾಗಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ಮಂಗಳವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿದ್ದಾರೆ.

ಮೈಸೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ವಿಸಿ ನಾಲೆಗೆ ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರನ್ನು ಹೊರ ತೆಗೆದಿದ್ದು, ಕಾರಿನಲ್ಲಿ ಐವರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಮೃತರನ್ನು ತುಮಕೂರು ನಿವಾಸಿ ಕೆ.ಟಿ.ಕೃಷ್ಣಪ್ಪ(64), ಚಂದ್ರಪ್ಪ(61), ಧನಂಜಯ್ಯ (55), ಬಾಬು, ಜಯಣ್ಣ ಎಂದು ಗುರುತಿಸಲಾಗಿದ್ದು, ಅವರ ಮೃತದೇಹವನ್ನು ಪಾಂಡವಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. 

ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರು ಚಾಲಕ ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ನಾಲೆಗೆ ಉರುಳಿ ಬಿದ್ದಿದೆ. 

ಸ್ಥಳಕ್ಕೆ ಮಂಡ್ಯ ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೋಮವಾರವಷ್ಟೇ ಕೆಆರ್ ಎಸ್ ಡ್ಯಾಂನಿಂದ ವಿಸಿ ನಾಲೆಗೆ ನೀರು ಬಿಡಲಾಗಿತ್ತು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel