ಡಾ ಜಿ ಪರಮೇಶ್ವರ್ 
ರಾಜ್ಯ

ರುದ್ರಗೌಡ ಪಾಟೀಲ್ ಮಹಾರಾಷ್ಟ್ರದಲ್ಲಿ ಇರುವ ಬಗ್ಗೆ ಮಾಹಿತಿ ಇದೆ, ಅಗತ್ಯಬಿದ್ದರೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಡಾ ಪರಮೇಶ್ವರ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ನಗರದ ವಸತಿ ಸಮುಚ್ಚಯದಿಂದ ಪರಾರಿಯಾಗಿರುವ ಘಟನೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಪೊಲೀಸರ ಕಾರ್ಯವೈಖರಿ ಬಗ್ಗೆ ಸಂಶಯ ಮೂಡುವಂತೆ ಮಾಡಿದೆ.

ಬೆಂಗಳೂರು: FDA ನೇಮಕಾತಿ ಪರೀಕ್ಷೆ ಹಗರಣದಲ್ಲಿ ಹೆಸರು ಮಾಡಿರುವ ರುದ್ರಗೌಡ ಡಿ ಪಾಟೀಲ್ ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದು, ಎಲ್ಲೇ ಅಡಗಿಕೊಂಡಿದ್ದರೂ ಆತನನ್ನು ಹಿಡಿಯುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಮಂಗಳವಾರ ಹೇಳಿದ್ದಾರೆ.

ಅಕ್ಟೋಬರ್ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆ ಬರೆಯಲು ಬ್ಲೂಟೂತ್ ಬಳಸಿದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಂದ 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಹೆಸರು ಕೇಳಿ ಬರುತ್ತಿದ್ದಂತೆ ಪಾಟೀಲ ಕಲಬುರಗಿ ಜಿಲ್ಲಾ ಕೇಂದ್ರ ಪಟ್ಟಣದ ವರದ ನಗರದಲ್ಲಿರುವ ಮಹಾಲಕ್ಷ್ಮಿ ಅಪಾರ್ಟ್‌ಮೆಂಟ್‌ನ ಕಾಂಪೌಂಡ್ ಗೋಡೆ ಹಾರಿ ಸೋಮವಾರ ಪರಾರಿಯಾಗಿದ್ದಾನೆ ಎಂದು ಸಿಸಿಟಿವಿ ದೃಶ್ಯಾವಳಿಗಳನ್ನು ಉಲ್ಲೇಖಿಸಿ ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣದಲ್ಲಿ ಸಹ ಪಾಟೀಲ್ ಆರೋಪಿಯಾಗಿದ್ದಾರೆ. ನಾವು ಈಗಾಗಲೇ ಆರೋಪಿಯನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದೇವೆ. ಆತ ಮಹಾರಾಷ್ಟ್ರಕ್ಕೆ ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ.

ಅವರನ್ನು ಬಂಧಿಸಲಾಗುವುದು, ಅದೇನು ದೊಡ್ಡ ವಿಷಯವಲ್ಲ. ಅವರು ತಪ್ಪಿಸಿಕೊಂಡು ಹೆಚ್ಚು ದಿನ ಓಡಾಡಲಾಗದು ಎಂದು ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು. ಪಾಟೀಲ್ ಪರಾರಿಯಾಗಲು ಸಹಕರಿಸಿದವರು ಪೊಲೀಸ್ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದರು. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪುನರುಚ್ಚರಿಸಿದರು.

ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅವರ ವಿರುದ್ಧ ಪ್ರಕರಣವಿದ್ದು, ಈ ಹಗರಣದಲ್ಲಿ ಅವರು ಭಾಗಿಯಾಗಿರುವುದರಿಂದ ಅವರ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರಗಳು ಸೇರ್ಪಡೆಯಾಗಲಿವೆ ಎಂದು ಪರಮೇಶ್ವರ ಹೇಳಿದರು.

ಪ್ರಶ್ನೆಯೊಂದಕ್ಕೆ, ನಾವು ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸುತ್ತೇವೆ ಮತ್ತು ಅಗತ್ಯವಿದ್ದರೆ, ನಾವು ಪ್ರಕರಣವನ್ನು ಸಿಐಡಿಗೆ ನೀಡುತ್ತೇವೆ. ನಮಗೆ ಬೇಕಾಗಿರುವುದು ಸತ್ಯಾಸತ್ಯತೆಯನ್ನು ಹೊರತರುವ ತನಿಖೆ ಮತ್ತು ಆರೋಪಿಗಳ ವಿರುದ್ಧ ಕ್ರಮ. ಪರೀಕ್ಷೆಯನ್ನು ರದ್ದುಪಡಿಸುವ ಮತ್ತು ಅದನ್ನು ಹೊಸದಾಗಿ ನಡೆಸುವ ಬಗ್ಗೆ, ಅಂತಹ ಪ್ರಶ್ನೆಗಳನ್ನು ಕೆಇಎಗೆ ಬಿಡಲಾಗಿದೆ ಎಂದು ಸಚಿವರು ಹೇಳಿದರು.

ಆರೋಪಿಗಳಿಗೆ ಕರುಣೆ ತೋರಿಸುವ ಪ್ರಶ್ನೆಯೇ ಇಲ್ಲ ಎಂದು ಕಲಬುರಗಿ ಜಿಲ್ಲೆಯ ಶಾಸಕ, ಕರ್ನಾಟಕ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದೇ ವೇಳೆ, ಪಾಟೀಲ್ ಪಾರಾಗಲು ಸಚಿವರು ಹಾಗೂ ಶಾಸಕರೊಬ್ಬರು ಸಹಾಯ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹಾಗೂ ಬಿಜೆಪಿ ಕರ್ನಾಟಕ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಇಡೀ ಕಾಂಗ್ರೆಸ್ ಪಕ್ಷ ಆರೋಪಿಗಳ ಬೆಂಬಲಕ್ಕೆ ನಿಂತಿದೆ ಮತ್ತು ಅವರನ್ನು ಬೆಂಬಲಿಸುತ್ತಿದೆ. ಆರ್.ಡಿ.ಪಾಟೀಲ್ ಸಾಮಾನ್ಯ ವ್ಯಕ್ತಿಯಲ್ಲ. ಅವರು ಆಡಳಿತಾರೂಢ ಕಾಂಗ್ರೆಸ್‌ನ ಪ್ರಮುಖರೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರ ಬೆಂಬಲದಿಂದಾಗಿ ಅವರು ಓಡಿಹೋದರು, ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT