ಇತ್ತೀಚೆಗೆ ಬಳ್ಳಾರಿ ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆದ ನಂತರ ಕೆಲ ಗ್ರಾಮಸ್ಥರೊಂದಿಗೆ ಅಧಿಕಾರಿಗಳು 
ರಾಜ್ಯ

ಬರಪೀಡಿತ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ: ಜಿಲ್ಲಾಡಳಿತದಿಂದ ಕಾರ್ಯಪಡೆ ರಚನೆ

ಸರಕಾರದಿಂದ ಸಿಗುವ ಅಲ್ಪಸ್ವಲ್ಪ ನೆರವಿನಿಂದ ಸರಿಯಾಗಿ ಜೀವನ ನಡೆಸಲು ಸಾಧ್ಯವಾಗದೆ ಬರಪೀಡಿತ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳ ಜನರು ಕೆಲಸ ಅರಸಿ ನಗರ, ಪಟ್ಟಣಗಳಿಗೆ ವಲಸೆ ಹೋಗುವ ಸಲುವಾಗಿ ತಮ್ಮ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಸನ್ನಿವೇಶವಿದೆ. 

ಬಳ್ಳಾರಿ: ಸರಕಾರದಿಂದ ಸಿಗುವ ಅಲ್ಪಸ್ವಲ್ಪ ನೆರವಿನಿಂದ ಸರಿಯಾಗಿ ಜೀವನ ನಡೆಸಲು ಸಾಧ್ಯವಾಗದೆ ಬರಪೀಡಿತ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳ ಜನರು ಕೆಲಸ ಅರಸಿ ನಗರ, ಪಟ್ಟಣಗಳಿಗೆ ವಲಸೆ ಹೋಗುವ ಸಲುವಾಗಿ ತಮ್ಮ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಸನ್ನಿವೇಶವಿದೆ. 

ಇದನ್ನು ತಡೆಯಲು ಬಳ್ಳಾರಿ ಜಿಲ್ಲಾಡಳಿತ ಎಲ್ಲಾ ತಾಲೂಕುಗಳಲ್ಲಿ ಕಾರ್ಯಪಡೆಗಳನ್ನು ರಚಿಸಿದೆ. ಅಧಿಕಾರಿಗಳು ನೀಡಿರುವ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಬರಗಾಲ ಬಂದಾಗಲೆಲ್ಲಾ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತದೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಪ್ರತಿನಿಧಿಗೆ ಮಾಹಿತಿ ನೀಡಿದ ಜಿಲ್ಲಾಡಳಿತದ ಅಧಿಕಾರಿಯೊಬ್ಬರು, ಬಾಲ್ಯ ವಿವಾಹ ತಡೆಗೆ ಎಲ್ಲ ತಾಲೂಕುಗಳಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಅಧಿಕಾರಿಗಳು ಇದೀಗ ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ.

ಉದ್ಯೋಗದ ಹುಡುಕಾಟದಲ್ಲಿ ಪಟ್ಟಣಗಳು ಮತ್ತು ನಗರಗಳಿಗೆ ವಲಸೆ ಹೋಗುವ ಮೊದಲು, ಅನೇಕ ಪೋಷಕರು ತಮ್ಮ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು ಪ್ರಯತ್ನಿಸುತ್ತಾರೆ. ಅಧಿಕಾರಿಗಳು ಹಾಗೆ ಮಾಡದಂತೆ ತಡೆದಾಗ, ಅನೇಕರು ತಮ್ಮ ನಿರ್ಧಾರಕ್ಕೆ ಬರಗಾಲ ಕಾರಣ ಎಂದು ಕಷ್ಟ ತೋಡಿಕೊಳ್ಳುತ್ತಾರೆ. ಈ ಪಿಡುಗಿನ ವಿರುದ್ಧ ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ಇಂತಹ ಘಟನೆಗಳು ಕಂಡುಬಂದಲ್ಲಿ 1098 ಗೆ ಕರೆ ಮಾಡಲು ನಾವು ಜನರನ್ನು ಕೇಳಿದ್ದೇವೆ ಎಂದು ಹೇಳಿದರು. 

ಮೇ ತಿಂಗಳಿನಿಂದ ಜಿಲ್ಲೆಯಲ್ಲಿ 61 ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿದೆ. ಪೋಷಕರ ವಿರುದ್ಧ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಇನ್ನೊಬ್ಬ ಅಧಿಕಾರಿ ಹೇಳಿದರು. ಬಾಲ್ಯವಿವಾಹಗಳಿಗೆ ಬರವನ್ನು ಕಾರಣವೆಂದು ಪರಿಗಣಿಸಲಾಗುವುದಿಲ್ಲ. ಇದು ಕಾನೂನಿಗೆ ವಿರುದ್ಧವಾಗಿದೆ. ಈ ಕಾನೂನನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT