ರಾಜ್ಯ

ಗುತ್ತಿಗೆದಾರರ ಬಿಲ್ ಇತ್ಯರ್ಥಕ್ಕೆ ಶೇ.8 ರಷ್ಟು ಕಮಿಷನ್: ಯಡಿಯೂರಪ್ಪ ಆರೋಪ

Srinivas Rao BV

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ವಿರುದ್ಧ ಬಿಲ್ ಇತ್ಯರ್ಥಕ್ಕೆ ಗುತ್ತಿಗೆದಾರರ ಬಳಿ ಶೇ.8 ರಷ್ಟು ಕಮಿಷನ್ ಕೇಳುತ್ತಿರುವ ಆರೋಪ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಕಾರ್ಯನಿರ್ವಹಣೆ ಶೈಲಿ ಹಾಗೂ ನೀತಿಗಳ ವಿರುದ್ಧ ನಗರದಲ್ಲಿ ಮೂರು ದಿನಗಳ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಯಡಿಯೂರಪ್ಪ ಇಸ್ದೇ ವೇಳೆ ತಿಳಿಸಿದ್ದಾರೆ.

ಗುತ್ತಿಗೆದಾರರಿಗೆ ಸರಿಯಾದ ಸಮಯಕ್ಕೆ ಬಿಲ್ ಪಾವತಿಯಾಗದ ಪರಿಣಾಮ ಇಂದು ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುವುದಕ್ಕೆ ಮುಂದಾಗುತ್ತಿಲ್ಲ ಎಂದು ಮಾಜಿ ಸಿಎಂ ಆರೋಪಿಸಿದ್ದಾರೆ. 

ಬಿಲ್ ಗಳನ್ನು ಇತ್ಯರ್ಥಗೊಳಿಸುವುದಕ್ಕಾಗಿ ಗುತ್ತಿಗೆದಾರರಿಂದ ಈ ಸರ್ಕಾರ ಶೇ.7.5-8 ರಷ್ಟು ಕಮಿಶಷನ್ ಕೇಳುತ್ತಿದೆ ಎಂದು ಯಡಿಯೂರಪ್ಪ ಆರೋಪ ಮಾಡಿದ್ದಾರೆ.

ಈ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನೆ ಮಾಡಲು ವಿಧಾನಸೌಧದ ಎದುರು ಸತ್ಯಾಗ್ರಹ (ಪ್ರತಿಭಟನೆ) ನಡೆಸುತ್ತೇವೆ. 
ಕಮಿಷನ್ ಪಡೆಯುವಂತಹ ಪರಿಸ್ಥಿತಿ ಇಂದು ರಾಜ್ಯಾದ್ಯಂತ ಇದೆ. ಈ ಸರ್ಕಾರದ ಕಾರ್ಯವೈಖರಿಯನ್ನು ಖಂಡಿಸುತ್ತೇನೆ. ಈ ಸರ್ಕಾರದ ನೀತಿಗಳನ್ನು ಖಂಡಿಸಿ ವಿಧಾನಸೌಧದ ಮುಂದೆ ಬೃಹತ್ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸುತ್ತೇವೆ. ನಾವು ಪ್ರತಿಭಟನೆಯ ದಿನಾಂಕಗಳನ್ನು ಶೀಘ್ರದಲ್ಲೇ ನಿರ್ಧರಿಸುತ್ತೇವೆ, ಬಹುಶಃ ಬೆಳಗಾವಿ ವಿಧಾನಸಭೆ ಅಧಿವೇಶನಕ್ಕೆ ಮುಂಚಿತವಾಗಿ, ಪ್ರತಿಭಟನೆ ನಡೆಯಲಿದೆ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಯಡಿಯೂರಪ್ಪ ಇಂದು ಬಿಜೆಪಿ ಶಾಸಕ ಮುನಿರತ್ನ ಪ್ರತಿನಿಧಿಸುವ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದರು.

ಆಡಳಿತಾರೂಢ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಪ್ರಗತಿಯಲ್ಲಿದ್ದ ಹಾಗೂ ಅನುದಾನ ಬಿಡುಗಡೆಯಾದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಅಪೂರ್ಣಗೊಂಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಹಲವಾರು ಪ್ರದೇಶಗಳಲ್ಲಿನ ರಸ್ತೆಗಳ ದುಃಸ್ಥಿತಿಯನ್ನು ಎತ್ತಿ ಹಿಡಿದ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

SCROLL FOR NEXT