ಬೆಂಗಳೂರು: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೆಲಗದರನಹಳ್ಳಿಯ ಕಾರ್ಖಾನೆಯೊಂದರಲ್ಲಿ ನಡೆದಿದೆ.
ಶ್ವೇತಾ (34) ಮೃತಪಟ್ಟ ಮಹಿಳೆ. ಗಂಡ ಮತ್ತು ಮಗನ ಜೊತೆ ಶ್ವೇತಾ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಬಣ್ಣ ಬೆರೆಸುವ ಮಿಕ್ಸರ್‌ಗೆ ಜಡೆ ಸಿಲುಕಿ ಘಟನೆ ನಡೆದಿದೆ. ಬಣ್ಣ ಗಟ್ಟಿಯಾಗುತ್ತಿದ್ದರಿಂದ ಪರಿಶೀಲಿಸಲು ಮಿಕ್ಸರ್ ಬಳಿ ಬಂದು ಬಗ್ಗಿದಾಗ ಈ ಅವಘಡ ಸಂಭವಿಸಿದೆ.
ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಮಿಕ್ಸರ್ ಶಬ್ದದಿಂದಾಗಿ ಯಾರಿಗೂ ಕೇಳಿಸಿಲ್ಲ. ಬಳಿಕ ಉಳಿದ ಕೆಲಸಗಾರರು ಮಿಕ್ಸರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.