ಆಟೋ - ಟ್ಯಾಂಕರ್ ಮುಖಾಮುಖಿ ಡಿಕ್ಕಿ 
ರಾಜ್ಯ

ಕಲಬುರಗಿ: ವಾಡಿ ಬಳಿ ಆಟೋ - ಟ್ಯಾಂಕರ್ ಮುಖಾಮುಖಿ ಡಿಕ್ಕಿ, 3 ತಿಂಗಳ ಮಗು ಸೇರಿ 6 ಮಂದಿ ಸಾವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಸಮೀಪ ಆಟೋ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಸಮೀಪ ಆಟೋ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.

ವಾಡಿಯಿಂದ ನಾಲವಾರ ಕಡೆ ತೆರಳುತ್ತಿದ್ದ ಆಟೋಗೆ ಹಲಕರ್ಟಾ ಬಳಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರೆಲ್ಲೂ ನಾಲವಾರ ಗ್ರಾಮದ ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ನಾಜ್ಮಿನ್ ಬೇಗಂ(28), ಬೀಬಿ ಫಾತಿಮಾ(12), ಅಬೂಬಕರ್(4), ಬೀಬಿ ಮರಿಯಮ್(3 ತಿಂಗಳು), ಮೊಹಮ್ಮದ್ ಪಾಷಾ(20) ಹಾಗೂ ಆಟೋ ಚಾಲಕ ಬಾಬಾ(35) ಎಂದು ಗುರುತಿಸಲಾಗಿದೆ ಮತ್ತು 10 ವರ್ಷದ ಬಾಲಕ ಮುಹಮ್ಮದ್ ಹುಸೇನ್ ಗಾಯಗೊಂಡಿದ್ದಾನೆ.

ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ಚಿತ್ತಾಪುರಕ್ಕೆ ಹೋಗಿ ಮರಳಿ ನಾಲವಾರ ಗ್ರಾಮಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಪಘಾತ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT