ರಾಜ್ಯ

ಕೋಲಾರ: ಬಾಲಕನ ಹತ್ಯೆ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಬಂಧನ, ಒಟ್ಟು 13 ಮಂದಿ ಅರೆಸ್ಟ್

Shilpa D

ಕೋಲಾರ: ನಗರದಲ್ಲಿ ಈಚೆಗೆ ನಡೆದಿದ್ದ 17 ವರ್ಷದ ಕಾರ್ತಿಕ್‌ ಸಿಂಗ್‌ ಎಂಬ ಪಿಯು ಮೊದಲ ವರ್ಷದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ನಸುಕಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ದೇವರಾಯಸಮುದ್ರ ಗ್ರಾಮದ ಬಳಿ ನಡೆದ ಕಾರ್ಯಾಚರಣೆ ವೇಳೆ ತಮ್ಮ ಮೇಲೆ ಹಲ್ಲೆ ನಡೆಸಿದ ಇಬ್ಬರು ಬಾಲಕರ ಕಾಲುಗಳಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹೊಡೆದಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಬಾಪೂಜಿ ಶಾಲೆ ಆವರಣದಲ್ಲಿ ಶುಕ್ರವಾರ (ನ.3) ರಾತ್ರಿ ಕಾರ್ತಿಕ್‌ ಸಿಂಗ್‌ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಪ್ರಕರಣ ಎ ಆರೋಪಿಗಳು ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದರು. ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರು ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅಂದು ಆರೋಪಿಗಳು ಮದ್ಯಪಾನ ಮಾಡಿ ಬಾಲಕನನ್ನು ಕೊಲೆ ಮಾಡಿದ್ದರು. ಆರೋಪಿಗಳಿಬ್ಬರು ಅಪ್ರಾಪ್ತರಾಗಿದ್ದಾರೆ.    

ವೈಯಕ್ತಿಕ ದ್ವೇಷ, ವೈಮನಸ್ಯವೇ ಈ ಕೊಲೆಗೆ ಕಾರಣ. ಹಣದ ವಿಚಾರ, ಹುಡುಗಿಗೆ ಸಂದೇಶ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದ ಮಾಹಿತಿಯೂ ಇದ್ದು, ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ಬಿ.ಆರ್‌.ರವಿಕಾಂತೇಗೌಡ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು. ಹುಡುಗಿ ವಿಚಾರದಲ್ಲಿ ಪ್ರಮುಖ ಆರೋಪಿ ಹಾಗೂ ಕಾಲೇಜು ಹುಡುಗನ ನಡುವಿನ ಹಳೆ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.

SCROLL FOR NEXT