ಆರ್ ಡಿ ಪಾಟೀಲ್ ಬಂಧನ 
ರಾಜ್ಯ

RD Patil Arrest: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಬಂಧನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. 

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. 

ಮಹಾರಾಷ್ಟ್ರದಲ್ಲಿ ಆರ್.ಡಿ ಪಾಟೀಲ್ ಅಡಗಿರುವುದನ್ನು ಪತ್ತೆ ಹಚ್ಚಿದ ಕಲಬುರಗಿ ಜಿಲ್ಲಾ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದು ಮಹಾರಾಷ್ಟ್ರದಿಂದ ಕಲಬುರಗಿಗೆ ಕರೆತರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ತನ್ನ ಬಂಧಿಸಲು ಬರುತ್ತಿದ್ದಾರೆ ಎಂಬುದನ್ನು ತಿಳಿದ ಆರ್ ಡಿ ಪಾಟೀಲ್ ನವೆಂಬರ್ 6ರಂದು ಕಲಬುರಗಿಯ ವರ್ಧಾ ಲೇಔಟ್​ನಲ್ಲಿರುವ ಮಹಾಲಕ್ಷ್ಮೀ ಅಪಾರ್ಟ್​ಮೆಂಟ್ ಕಾಂಪೌಂಡ್ ಹಾರಿ ಪರಾರಿಯಾಗಿದ್ದನು.

ಆರ್ ಡಿ ಪಾಟೀಲ್​ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ ಮೆಂಟ್ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್​ಡಿ ಪಾಟೀಲ್​ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದರು ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ