ರಾಜ್ಯ

ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು, ಮುಂದೊಂದು ದಿನ ಈ ಪ್ರಕರಣ ಬಗ್ಗೆ ಮಾತನಾಡುತ್ತೇನೆ: ಅಭಿನವ ಹಾಲಶ್ರೀ

Sumana Upadhyaya

ಬೆಂಗಳೂರು:  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಗ್ಯಾಂಗ್​ನಿಂದ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ. 

ಬಿಜೆಪಿ ಎಂಎಲ್​ಎ ಸ್ಥಾನಕ್ಕೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಪರಪ್ಪನ ಅಗ್ರಹಾರ ಸೇರಿದ್ದರು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು ಹಾಲಶ್ರೀ ಅವರು ಜೈಲಿನಿಂದ ಹೊರ ಬಂದಿದ್ದು ಅವರನ್ನು ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹೊದಿಸಿ ಸ್ವಾಗತಿಸಿದ್ದು ಕಂಡುಬಂತು. 

ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹಾಲಶ್ರೀ, ಪ್ರತ್ಯಕ್ಷವಾಗಿ ಕಂಡರು ಪ್ರಮಾಣಿಸಿ ನೋಡಬೇಕು. ಅದನ್ನು ಪ್ರಕರಣದ ತನಿಖೆ ವೇಳೆ ಪರಿಗಣಿಸಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ನಮ್ಮನ್ನು ನಂಬಿ ಅರಾಧಿಸುವ ಸಮಾಜಕ್ಕೆ ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದ ಆಶಯಕ್ಕೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೇನೆ. ಮುಂದೆಯೂ ಆದೇ ರೀತಿ ಬದುಕು ಸಾಗಿಸುತ್ತೇನೆ ಎಂದರು.

ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್‌ ಮೊನ್ನೆ ಬುಧವಾರ ಜಾಮೀನು ಮಂಜೂರು ಮಾಡಿತ್ತು. 

SCROLL FOR NEXT