ಸಾಂದರ್ಭಿಕ ಚಿತ್ರ 
ರಾಜ್ಯ

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಕಡಿತ: ವಿದ್ಯಾರ್ಥಿ-ಪೋಷಕರಲ್ಲಿ ಆತಂಕ

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದಾಗಿ ಸರ್ಕಾರ ಇತ್ತೀಚೆಗೆ ತಿಳಿಸಿತ್ತು. ಕಾರ್ಮಿಕ ಇಲಾಖೆಯು ಸಾಕಷ್ಟು ಹಣದ ಕೊರತೆ ಎದುರಿಸುತ್ತಿದೆ ಎಂದು ಸರ್ಕಾರ ಇದಕ್ಕೆ ಕಾರಣ ನೀಡಿದ್ದು, ವಿದ್ಯಾರ್ಥಿಗಳು ಮತ್ತು ತಜ್ಞರು ಸರ್ಕಾರದ ಕ್ರಮಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದಾಗಿ ಸರ್ಕಾರ ಇತ್ತೀಚೆಗೆ ತಿಳಿಸಿತ್ತು. ಕಾರ್ಮಿಕ ಇಲಾಖೆಯು ಸಾಕಷ್ಟು ಹಣದ ಕೊರತೆ ಎದುರಿಸುತ್ತಿದೆ ಎಂದು ಸರ್ಕಾರ ಇದಕ್ಕೆ ಕಾರಣ ನೀಡಿದ್ದು, ವಿದ್ಯಾರ್ಥಿಗಳು ಮತ್ತು ತಜ್ಞರು ಸರ್ಕಾರದ ಕ್ರಮಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. 

ಈ ಕ್ರಮವು ಬಡತನದ ಅಂಚಿನಲ್ಲಿರುವ ಕಟ್ಟಡ ಕಾರ್ಮಿಕರ ಮಕ್ಕಳ ಕಡಿಮೆ ಶಾಲಾ ದಾಖಲಾತಿಗೆ ಕಾರಣವಾಗಬಹುದು ಮತ್ತು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಹುದು ಎಂದು ಸಂಬಂಧಪಟ್ಟವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

2022-23 ನೇ ಸಾಲಿನಲ್ಲಿ ಕಾರ್ಮಿಕ ಇಲಾಖೆಯು 13 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವೇತನ ಅರ್ಜಿಗಳನ್ನು ಸ್ವೀಕರಿಸಿದೆ ಮತ್ತು 7 ಲಕ್ಷ ವಿದ್ಯಾರ್ಥಿಗಳನ್ನು ಫಲಾನುಭವಿಗಳಾಗಿ ಗುರುತಿಸಿದೆ ಎಂದು ಅಂಕಿಅಂಶ ಹೇಳುತ್ತದೆ. ಶಾಲಾ ಹಂತದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ಶೇ 80-85 ರಷ್ಟು ಕಡಿತಗೊಳಿಸಲು ಇಲಾಖೆ ನಿರ್ಧರಿಸಿದೆ. ಇಂಜಿನಿಯರಿಂಗ್ ಅಥವಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಇತರ ಸ್ನಾತಕೋತ್ತರ ವಿದ್ಯಾರ್ಥಿಗಳ ಮೇಲೆ ಇದರ ಪ್ರಭಾವ ಬೀರುತ್ತದೆ. 

ಎಂಬಿಬಿಎಸ್ ವಿದ್ಯಾರ್ಥಿ ವಾರ್ಷಿಕವಾಗಿ 60,000 ರೂಪಾಯಿಗಳನ್ನು ಪಡೆಯುತ್ತಿದ್ದರು, ಅದು ಈಗ ಕೇವಲ 11,000 ರೂಪಾಯಿಗೆ ಕಡಿತಗೊಳ್ಳುತ್ತದೆ ಮತ್ತು ಪಿಜಿ ವಿದ್ಯಾರ್ಥಿಗಳ ಮೊತ್ತವು 35,000 ರೂಪಾಯಿಗಳಿಂದ 10,000 ರೂಪಾಯಿಗೆ ಇಳಿಕೆಯಾಗುತ್ತದೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿಗಳು ಮೊದಲ ವರ್ಷ ಮತ್ತು ಅಂತಿಮ ವರ್ಷದ ಕೋರ್ಸ್‌ಗಳ ವಿದ್ಯಾರ್ಥಿಗಳೊಂದಿಗೆ ಮಾತನಾಡಿದಾಗ, ಈ ಕ್ರಮವು ದೊಡ್ಡ ಆಘಾತವನ್ನು ತಂದಿದೆ ಎನ್ನುತ್ತಾರೆ. ವರ್ಷದಿಂದ ವರ್ಷಕ್ಕೆ ಶಿಕ್ಷಣದ ವೆಚ್ಚವು ಹೆಚ್ಚುತ್ತಿರುವಾಗ, ವಿದ್ಯಾರ್ಥಿವೇತನವು ಅವರಿಗೆ ಅನುಕೂಲವಾಗುತ್ತಿತ್ತು, ಅದು ಈಗ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು. 

ಬೆಂಗಳೂರಿನ ಎಸ್‌ಕೆಎಸ್‌ಜೆಟಿಐನಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಶಿವಮೊಗ್ಗದ ದೀಕ್ಷಾ ಗುಡ್ಡಪ್ಪ, ನನ್ನ ತಂದೆ 25 ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದಾರೆ. ಕನಿಷ್ಠ ವಿದ್ಯಾರ್ಥಿವೇತನದ ಅಡಿಯಲ್ಲಿ ನಾನು ನನ್ನ ಮಾಧ್ಯಮಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಉನ್ನತ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡೆ. ಸರ್ಕಾರದ ಹೊಸ ನಿಯಮಗಳಿಂದ ನಾವು ಓದು ಮುಂದುವರಿಸುವುದು ಕಷ್ಟವಾಗುತ್ತದೆ ಎಂದರು. 

ಮೈಸೂರಿನಲ್ಲಿ ಓದುತ್ತಿರುವ ಮಂಡ್ಯದ ಮತ್ತೋರ್ವ ವಿದ್ಯಾರ್ಥಿನಿ ಚೈತ್ರ ಯುಕೆ, ಸ್ಕಾಲರ್‌ಶಿಪ್ ಮೊತ್ತ ಯಾವಾಗಲೂ ವಿಳಂಬವಾಗುವುದರಿಂದ ನಮ್ಮ ಪೋಷಕರು ಶುಲ್ಕ ಪಾವತಿಸಲು ಬ್ಯಾಂಕ್‌ಗಳಲ್ಲಿ ಸಾಲ ಮಾಡಬೇಕಾಗಿದೆ. ಶಿಕ್ಷಣಕ್ಕೆ ನಮಗೆ ಸಹಾಯವಿಲ್ಲದಿದ್ದರೆ ಆರ್ಥಿಕವಾಗಿ ಕಷ್ಟ ಎಂದು ಹೇಳಿದರು.

ಸಣ್ಣ ಮೊತ್ತವೂ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಸರ್ಕಾರ ಅವರನ್ನು ಬೆಂಬಲಿಸದಿದ್ದರೆ ಮತ್ತೆ ಯಾರೂ ಸಹಾಯ ಮಾಡುತ್ತಾರೆ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್‌ನ (CRT) ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT