ಆರ್ ಡಿ ಪಾಟೀಲ್ 
ರಾಜ್ಯ

KEA Exam Scam: ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಕೆಇಎ ಪರೀಕ್ಷಾ ಅಕ್ರಮ (KEA Exam Scam) ಪ್ರಕರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ (KEA Exam Scam) ಪ್ರಕರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಸೇರಿ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳಾದ ಆರ್ ಡಿ ಪಾಟೀಲ್, ಸಂತೋಷ್ ಹಾಗೂ ಸಲೀಂನನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ಮನವಿ ಮಾಡಿದ್ದರು. ಆದರೆ 2ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಮೂರ್ತಿ ಸ್ಮಿತಾ ಅವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಶೋಕನಗರ ಠಾಣೆ ಪೊಲೀಸರು ಹಗರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಸ್ಥಳ ಮಹಜರು ನಡೆಸಿದ್ದರು. ಆ ಬಳಿಕ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. 

KEA ಬ್ಲೂಟೂತ್ ಹಗರಣ: CID ತನಿಖೆಗೆ ಆದೇಶಿಸಿದ ಸರ್ಕಾರ
2023ರ ಅಕ್ಟೋಬರ್ 28ರಂದು ಕಲಬುರಗಿ ಮತ್ತು ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಗಳನ್ನು ಬರೆಯಲು ಬ್ಲೂಟೂತ್ ಸಾಧನಗಳನ್ನು ಬಳಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಐಪಿಸಿ 109, 114, 120 ಬಿ ಹಾಗೂ ಇತರೆ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಬ್ಲೂಟೂತ್ ಹಗರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್.ಹಿತೇಂದ್ರ ಆದೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT