ಅಲ್ಲಮಪ್ರಭು ಮಹಾಸ್ವಾಮೀಜಿ 
ರಾಜ್ಯ

ಚಿಂಚಣಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

ಚಿಂಚಣಿ ಸಿದ್ದಸಂಸ್ಥಾನ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ (63) ಭಾನುವಾರ ಲಿಂಗೈಕ್ಯರಾಗಿದ್ದಾರೆ.

ಚಿಕ್ಕೋಡಿ (ಬೆಳಗಾವಿ): ಚಿಂಚಣಿ ಸಿದ್ದಸಂಸ್ಥಾನ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ (63) ಭಾನುವಾರ ಲಿಂಗೈಕ್ಯರಾಗಿದ್ದಾರೆ.

ಚಿಂಚಣಿ ಶ್ರೀಗಳು ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಭಾನುವಾರ) ಮುಂಜಾನೆ ಲಿಂಗೈಕ್ಯರಾಗಿದ್ದಾರೆ.

ಕಳೆದ 30 ವರ್ಷದಿಂದ ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಬೆಳವಣಿಗೆ ಪ್ರಮುಖ ಪಾತ್ರ ವಹಿಸಿ ಕನ್ನಡ ಉಳಿವಿಗಾಗಿ ಹಗಲು ರಾತ್ರಿ ಜಾಗೃತಿ ಮೂಡಿಸುತ್ತಿದ್ದರು. ಪ್ರತಿ ವರ್ಷ ನ.2 ರಂದು ಶ್ರೀಮಠದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಿ ಕನ್ನಡ ಪುಸ್ತಕ ಪ್ರಕಟಿಸಿ ಕನ್ನಡಿಗರಿಗೆ ಓದಲು ಕೊಡುತ್ತಿದ್ದರು.ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದದಲ್ಲಿ ಶೋಕ ಮನೆಮಾಡಿದೆ.

ಭಾನುವಾರವೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಇನ್ನೂ ನೂರಾರು ಭಕ್ತರು ಮಠದತ್ತ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿಕ್ಕೋಡಿ ನಗರದಿಂದ 6 ಕಿ.ಮೀ ದೂರದಲ್ಲಿ ಇರುವ ಚಿಂಚಣಿ ಎಂಬ ಪುಟ್ಟ ಗ್ರಾಮದಲ್ಲಿನ ಅಲ್ಲಮಪ್ರಭು ಸಿದ್ದಸಂಸ್ಥಾನ ಮಠವು ಕನ್ನಡದ ಕಾಯಕದ ಮೂಲಕ ಇಡೀ ನಾಡಿನಾದ್ಯಂತ ಚಿರಪರಿಚಿತವಾಗಿದೆ. ಇದರ ಪೀಠಾಧಿಪತಿಗಳಾದ ಅಲ್ಲಮಪ್ರಭು ಸ್ವಾಮೀಜಿ ಅವರು ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಹೊಂದಿದ್ದಾರೆ.

ಕನ್ನಡ ನುಡಿ, ಗಡಿ, ಸಂಸ್ಕೃತಿ ಸಂರಕ್ಷಣೆ ಮತ್ತು ಸಂವರ್ಧನೆಯ ದೀಕ್ಷೆ ತೊಟ್ಟು ಕನ್ನಡದ ಅಸ್ಮಿತೆಯನ್ನು ಗಟ್ಟಿಗೊಳಿಸುವ ಕೈಂಕರ್ಯದಲ್ಲಿ ಅವರು ಕ್ರಿಯಾಶೀಲರಾಗಿದ್ದಾರೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ಜಾಗೃತಿಯುಂಟು ಮಾಡುತ್ತಿದ್ದಾರೆ. ಕನ್ನಡ ನಿತ್ಯೋತ್ಸವ ಆಗಬೇಕು ಎಂಬ ಕನಸನ್ನು ನನಸು ಮಾಡಿದ ಮಠವಿದು.

ಅಲ್ಲಮಪ್ರಭು ಜನಕಲ್ಯಾಣ ಸಂಸ್ಥೆಯ ಕನ್ನಡ ಜಾಗೃತಿ ಪುಸ್ತಕ ಮಾಲೆಯ ಮೂಲಕ ಇದುವರೆಗೆ ಆಧುನಿಕ ಕರ್ನಾಟಕದ ಆತಂಕಗಳು, ಕನ್ನಡತನ ಮತು ಭಾರತೀಯತೆ, ಮಹಾಜನ ವರದಿ ಒಂದು ಅವಲೋಕನ, ಕನ್ನಡದ ಕೋಟೆ ಕೆಎಲ್‌ಇ ಸಂಪ್ರದಾಯದ ಇತಿಹಾಸ, ರಂಗಭೂಮಿ-ಕನ್ನಡದ ಸಂವೇಧನೆ, ನಮ್ಮ ನಾಡು, ನುಡಿ ಮತ್ತು ಗಡಿ ಕನ್ನಡದ ಕಟ್ಟೋಣ, ಕರ್ನಾಟಕ ಏಕೀಕರಣ ಚಳವಳಿ, ಕನ್ನಡ-ಕನ್ನಡಿಗ, ಕರ್ನಾಟಕ ಏಕೀಕರಣ ಚಳವಳಿ ಮತ್ತು ಮಹಿಳೆ, ಮಹಾದಾಯಿ ನೀರಿಗಾಗಿ ಹೋರಾಟ ಮತ್ತು ಕನ್ನಡಕ್ಕೆ ಕೈ ಎತ್ತು…ಮೊದಲಾದ 45 ಕ್ಕೂ ಹೆಚ್ಚು ಮೌಲಿಕ ಗ್ರಂಥಗಳನ್ನು ಪ್ರಕಟಿಸಲಾಗಿದೆ. ಮರಾಠಿಯ ಹಲವು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವ ಮೂಲಕ ಕನ್ನಡ-ಮರಾಠಿ ಸಾಹಿತ್ಯ ಮತ್ತು ಸಂಸ್ಕೃತಿಕ ಬಾಂಧವ್ಯವನ್ನು ಹೆಚ್ಚಿಸಿದ್ದಾರೆ.

ಸ್ವಾಮೀಜಿಗಳು ಕನ್ನಡ ಪರವಾದ ಪುರಾತನ ದಾಖಲೆಗಳನ್ನು ಸಂಗ್ರಹಿಸುವಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಕನ್ನಡದ ಇತಿಹಾಸ ತಿಳಿಸುವ ಅಪರೂಪದ ದಾಖಲೆಗಳು ಅವರ ಬಳಿ ಇವೆ. ದೇಶ-ವಿದೇಶ ಕರೆನ್ಸಿಗಳ ಸಂಗ್ರಹವೂ ಇವೆ. ಬೋನ್ಸಾಯ್‌ ಸಸ್ಯ ಬೆಳೆಸುವ ಹವ್ಯಾಸ ಹೊಂದಿದ್ದರು.

ಜಾತ್ರೆ-ಉತ್ಸವಗಳಲ್ಲಿ ರಥೋತ್ಸವ ನಡೆಸುವುದು ಸಾಮಾನ್ಯ. ಆದರೆ ಈ ಮಠದಲ್ಲಿ ಸ್ವಾಮೀಜಿ ಅವರು ಕನ್ನಡ ತೇರು ನಿರ್ಮಿಸಿ ಕಳೆದೊಂದು ದಶಕದಿಂದ ಸಿರಿಗನ್ನಡದ ತೇರು ಎಳೆಯುತ್ತಿದ್ದಾರೆ. ಅಪ್ಪಟ ಕನ್ನಡದ ರಥವಾಗಿರುವ ಇದರಲ್ಲಿ 32 ಸಾಹಿತಿಗಳ ಚಿತ್ರಗಳು ಮತ್ತು 16 ಕನ್ನಡದ ಘೋಷಣೆಗಳನ್ನು ಕೆತ್ತಲಾಗಿದೆ. ತೇರಿನ ಎಂಟು ಭಾಗಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಕಲಾಗಿದೆ. ಇದರ ನಡುವೆ ತಾಯಿ ಭುವನೇಶ್ವರಿ ಮೂರ್ತಿಯನ್ನು ಇರಿಸಿ ಪ್ರತಿ ವರ್ಷ ಯುಗಾದಿ ಹಬ್ಬದಂದು ತೇರನ್ನು ಎಳೆಯಲಾಗುತ್ತದೆ.

ಕಳೆದ 20 ವರ್ಷದಿಂದ ಪ್ರತಿ ವರ್ಷ ಮಠದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಾ ಬರಲಾಗಿದೆ. ನಾಡಿನ ಖ್ಯಾತ ಸಾಹಿತಿಗಳು ಮತ್ತು ಕನ್ನಡದ ವಿದ್ವಾಂಸರನ್ನು ಕರೆಯಿಸಿ ಶ್ರೀಮಠವು ಮಾಡುವ ಕನ್ನಡದ ಕಾಯಕವನ್ನು ಪರಿಚಯ ಮಾಡಲಾಗುತ್ತದೆ. ಗಡಿ ಭಾಗದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಜಾಗೃತಿ ಉಂಟು ಮಾಡಲು ಅಲ್ಲಮಪ್ರಭು ಸಿದ್ದಸಂಸ್ಥಾನ ಮಠ ಕೆಲಸ ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಸಿಎಂ ನಿವಾಸಕ್ಕೆ ಬ್ರೇಕ್ ಫಾಸ್ಟ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ- ಡಿಕೆ ಸೋದರರಿಂದ ಸ್ವಾಗತ-Video

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ ಇಂದಿನ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್ !

'ಪುರುಷ ಸಲಿಂಗಿ'ಗಳಲ್ಲಿ ಹೆಚ್ಚಿನ ಏಡ್ಸ್ ರೋಗ: ಸಚಿವ ದಿನೇಶ್ ಗುಂಡೂರಾವ್ ಕಳವಳ!

ತಾಂತ್ರಿಕ ದೋಷ: ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು! ಪರದಾಡಿದ ಪ್ರಯಾಣಿಕರು-Video

ಮಹಿಳಾ ವಿಶ್ವಕಪ್ ಗೆದ್ದ ಬಳಿಕ ಹರ್ಮನ್ ಪ್ರೀತ್ ಕೌರ್ ಗೆ ಮತ್ತೊಂದು 'ಜಾಕ್ ಪಾಟ್'! Video

SCROLL FOR NEXT