ರಾಜ್ಯ

ರಾಜ್ಯದಲ್ಲಿ ಆರ್ಥಿಕ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳ ಕೈಗೆತ್ತಿಕೊಳ್ಳುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ

Manjula VN

ಯರೋಗೋಳ (ಕೋಲಾರ ಜಿಲ್ಲೆ): ರಾಜ್ಯದಲ್ಲಿ ಆರ್ಥಿಕ ಕೊರತೆಯಿಲ್ಲ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಕೋಲಾರ, ಬಂಗಾರಪೇಟೆ, ಮಾಲೂರು ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಯರಗೋಳ್ ಡ್ಯಾಂ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದ್ದು, ಹೀಗಾಗಿಯೇ ಸರ್ಕಾರ ಯಾವುದೇ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಆದರೆ, ಸರ್ಕಾರದಲ್ಲಿ ಅಂತಹ ಸಮಸ್ಯೆಗಳಿಲ್ಲ. ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಅನುದಾನವನ್ನು ಬಿಡುಗಡೆ ಮಾಡುತ್ತಿದ್ದೇವೆಂದು. ಇಂತಹ ಅಭಿವೃದ್ಧಿ ಕಾಮಗಾರಿಗಳನ್ನು ನೋಡಿ ವಿರೋಧ ಪಕ್ಷಗಳು ಕಣ್ಣು ತೆರೆಯಬೇಕು ಎಂದು ತಿರುಗೇಟು ನೀಡಿದರು.

2,223 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಉದ್ಘಾಟಿಸಿದ್ದೇನೆ. ಹಣವಿಲ್ಲದಿದ್ದರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನಿಸಿದರು.

ಅಭಿವೃದ್ಧಿ ಕಾರ್ಯಗಳಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು. ಎಚ್.ಡಿ.ಕುಮಾರಸ್ವಾಮಿ (ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ) ಸರ್ಕಾರದ ಮೇಲೆ ಆರೋಪ ಮಾಡುವುದನ್ನು ಬಿಡಬೇಕು. ಕಾಂಗ್ರೆಸ್ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲಿ ಎಂದು ತಿಳಿಸಿದರು.

SCROLL FOR NEXT