ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಐದು ಅಂತಸ್ತಿನ ಕಟ್ಟಡ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬಾಣಸವಾಡಿ ಹೊರ ವರ್ತುಲ ರಸ್ತೆಯಲ್ಲಿ ಐದು ಅಂತಸ್ತಿನ‌ ಬಿಲ್ಡಿಂಗ್ ಧಗ-ಧಗನೇ ಹೊತ್ತಿ ಉರಿದಿದೆ. ತಡರಾತ್ರಿ 12 ಗಂಟಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ  ಕೆನ್ನಾಲಿಗೆ ನೋಡ ನೋಡುತ್ತಿದ್ದಂತೆಯೇ ಇಡೀ ಕಟ್ಟಡ ಅವರಿಸಿದೆ. 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬಾಣಸವಾಡಿ ಹೊರ ವರ್ತುಲ ರಸ್ತೆಯಲ್ಲಿ ಐದು ಅಂತಸ್ತಿನ‌ ಬಿಲ್ಡಿಂಗ್ ಧಗ-ಧಗನೇ ಹೊತ್ತಿ ಉರಿದಿದೆ. ತಡರಾತ್ರಿ 12 ಗಂಟಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ  ಕೆನ್ನಾಲಿಗೆ ನೋಡ ನೋಡುತ್ತಿದ್ದಂತೆಯೇ ಇಡೀ ಕಟ್ಟಡ ಅವರಿಸಿದೆ. 

ಘಟನೆಯಲ್ಲಿ ಫರ್ನಿಚರ್ ಶಾಪ್, ಕೋಚಿಂಗ್ ಸೆಂಟರ್, ಐಟಿ ಕಂಪನಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.  ನೆಲ ಮಹಡಿ ಮತ್ತು ಮೊದಲನೇ ಮಹಡಿ ಫರ್ನಿಚರ್ ಶೋರೂಂ ಇತ್ತು. ಎರಡನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ಇತ್ತು. ಮೂರು ಮತ್ತು ನಾಲ್ಕನೇ ಮಹಡಿಯಲ್ಲಿ ಸಾಫ್ಟ್‌ವೇರ್ ಕಂಪನಿ ಇತ್ತು. ಸ್ಖಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. 

ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕಟ್ಟಡ ಶಂಕರ್ ಎಂಬುವರಿಗೆ ಸೇರಿದ್ದಾಗಿದೆ. ಶಂಕರ್ ಅವರು ಐದು ವರ್ಷಗಳಿಂದ ಕಟ್ಟಡ ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!