ಸಾಂದರ್ಭಿಕ ಚಿತ್ರ 
ರಾಜ್ಯ

ಚನ್ನಪಟ್ಟಣದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್; ತಂದೆ-ಮಗ ಸಾವು

ರಾಮನಗರ ಜಿಲ್ಲೆಯಲ್ಲಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಚನ್ನಪಟ್ಟಣ ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ರಾಮನಗರ: ಜಿಲ್ಲೆಯಲ್ಲಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಚನ್ನಪಟ್ಟಣ ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತರನ್ನು ಸಿದ್ದಪ್ಪ (65) ಮತ್ತು ಅರುಣ್ (23) ಎಂದು ಗುರುತಿಸಲಾಗಿದೆ. ತಂದೆ-ಮಗ ಎನ್ನಲಾಗಿದೆ.

ಮೂಲಗಳ ಪ್ರಕಾರ, ಚನ್ನಪಟ್ಟಣಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಸ್ಟ್ರಿಂಗ್ ಆಪರೇಷನ್ ವಿಡಿಯೋಗೂ ನನಗೂ ಯಾವುದೇ ಸಂಬಂಧ ಇಲ್ಲ; ಚಾರಿತ್ರ್ಯಹನನದ ಪ್ರಯತ್ನ- ಸಿದ್ದರಾಮಯ್ಯ