ಕಾಂಗ್ರೆಸ್ ಟ್ವೀಟ್ ಮಾಡಿರುವ ವಿಡಿಯೋ ಚಿತ್ರ 
ರಾಜ್ಯ

ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: ಎಚ್ ಡಿಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಬೆಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಹೌದು.. ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ವಿಡಿಯೋ ಸಹಿತ ಸುದೀರ್ಘ ಟ್ವೀಟ್ ಮಾಡಿದ್ದು, 'ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಕುಮಾರಸ್ವಾಮಿ  ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ.. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ! ಎಂದು ಕಿಡಿಕಾರಿದೆ.

ಅಲ್ಲದೆ.. ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?!.

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಕಿಡಿಕಾರಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ