ಬೆಂಗಳೂರು-ಧಾರವಾಡ 'ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು' ಸೇವೆ ಬೆಳಗಾವಿಯವರೆಗೆ ವಿಸ್ತರಣೆ, ರೈಲ್ವೆ ಸಚಿವಾಲಯ ಆದೇಶ
ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ನವದೆಹಲಿ: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಈ ಕುರಿತ ಆದೇಶವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರು-ಧಾರವಾಡ ದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ.
ರೈಲಿನ ವೇಳಾಪಟ್ಟಿ ಇಂತಿದೆ: ಬೆಂಗಳೂರು-ಬೆಳಗಾವಿ ರೈಲು ಸಂಖ್ಯೆ (20661) ಬೆಳ್ಳಿಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ.
ಹುಬ್ಬಳ್ಳಿ -ಧಾರವಾಡ ನಡುವೆ ಜೂನ್ 27ರಿಂದ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಗೊಂಡಿತ್ತು. ಆದರೆ ಬೆಳಗಾವಿಯವರೆಗೆ ವಿಸ್ತರಿಸುವ ಬೇಡಿಕೆಗೆ ಸ್ಪಂದನೆ ಸಿಕ್ಕಿರಲಿಲ್ಲ. ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಬೇಡಿಕೆಗೆ ಮಣಿದ ರೈಲ್ವೆ ಇಲಾಖೆ ಕೊನೆಗೂ ಬೆಳಗಾವಿಗೆ ಸಂಚಾರ ಪ್ರಾರಂಭಿಸುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.