ದರ್ಶನ್ ತೂಗುದೀಪ 
ರಾಜ್ಯ

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ನಟ ದರ್ಶನ್

ನೆರೆಮನೆಯ ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಬುಧವಾರ ರಾಜರಾಜೇಶ್ವರಿ ನಗರದ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ನೆರೆಮನೆಯ ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಬುಧವಾರ ರಾಜರಾಜೇಶ್ವರಿ ನಗರದ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟನ ನಿವಾಸದ ಪಕ್ಕದಲ್ಲಿನ ಖಾಲಿ ಜಾಗದಲ್ಲಿ ತನ್ನ ಕಾರನ್ನು ನಿಲ್ಲಿಸಿದ್ದಕ್ಕಾಗಿ ತನ್ನ ಮೇಲೆ ದಾಳಿ ಮಾಡಲು ನಾಯಿಗಳನ್ನು ಬಿಡಲಾಗಿದೆ ಎಂದು ಲಾ ಅಭ್ಯಾಸ ಮಾಡುತ್ತಿರುವ ದೂರುದಾರ ಮಹಿಳೆ ಅಮಿತಾ ಜಿಂದಾಲ್ ಆರೋಪಿಸಿದ್ದಾರೆ.

ಆಕೆಯ ಪ್ರಕಾರ, ದರ್ಶನ್ ಅವರ ನಿವಾಸದ ಉಸ್ತುವಾರಿಗಳು ಪಾರ್ಕಿಂಗ್ ಅನ್ನು ವಿರೋಧಿಸಿದರು ಮತ್ತು ಮನೆಯಲ್ಲಿ ಮೂರು ನಾಯಿಗಳು ಇರುವುದು ನನ್ನ ಗಮನಕ್ಕೆ ಬಂತು. ಈ ವೇಳೆ ಅವುಗಳಲ್ಲಿ ಒಂದನ್ನು ನನ್ನ ಮೇಲೆ ಬಿಡಲಾಯಿತು ಎಂದಿದ್ದಾರೆ.

ಸಿಬ್ಬಂದಿ ಮತ್ತು ದೂರುದಾರರ ನಡುವೆ ವಾಗ್ವಾದ ನಡೆದ ತಕ್ಷಣವೇ ಎರಡು ನಾಯಿಗಳು ಮಹಿಳೆ ಮೇಲೆ ದಾಳಿ ನಡೆಸಿದ್ದು, ಕಚ್ಚಿವೆ ಎಂದು ಆರೋಪಿಸಲಾಗಿದೆ.

ಪೊಲೀಸರು ದರ್ಶನ್ ಅವರನ್ನು ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ಸಂಬಂಧ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದ ಪೊಲೀಸರು, ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಯ ಜೊತೆಗೆ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸೂಚಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ