ಪೋಸ್ಟರ್ ತೆಗೆಯುತ್ತಿರುವ ಪೊಲೀಸರು. 
ರಾಜ್ಯ

ಬೆಂಗಳೂರು: ಜೆಡಿಎಸ್‌ ಕಚೇರಿ ಗೋಡೆ ಮೇಲೆ 'ವಿದ್ಯುತ್‌ ಕಳ್ಳ ಕುಮಾರಸ್ವಾಮಿ' ಪೋಸ್ಟರ್‌!

ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಿರುವುದು ಕಂಡುಬಂದಿದೆ.

ಬೆಂಗಳೂರು: ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಿರುವುದು ಕಂಡುಬಂದಿದೆ.

ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ಮಾಜಿ ಸಿಎಂ ಮೇಲೆ ಬೆಸ್ಕಾಂ ಜಾಗೃತ ದಳ ಪ್ರಕರಣದ ದಾಖಲಿಸಿಕೊಂಡಿತ್ತು. ಹೀಗಾಗಿ ಎಚ್‌ಡಿಕೆ ಅವರನ್ನು ವ್ಯಂಗ್ಯವಾಡಲು ಕಿಡಿಗೇಡಿಗಳು ಪೋಸ್ಟರ್‌ ಅಂಟಿಸಿದ್ದಾರೆ.

ಕುಮಾರಸ್ವಾಮಿ ಕರೆಂಟ್‌ 200 ಯುನಿಟ್‌ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್‌ ಕದ್ದರೂ ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ.

ಈ ನಡುವೆ ಪೋಸ್ಟರ್ ಕುರಿತು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪೋಸ್ಟರ್ ತೆಗೆಯುವ ಕೆಲಸ ಮಾಡಿದರು.

ಕುಮಾರಸ್ವಾಮಿ ವಿರುದ್ಧ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್​ಐಆರ್ ದಾಖಲಾಗಿದೆ.

ಕುಮಾರಸ್ವಾಮಿ ಅವರ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಬಳಸಿದ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಈ ವಿಚಾರವಾಗಿ ಕುಮಾರಸ್ವಾಮಿ ಈಗಾಗಲೇ ಸ್ಪಷ್ಟನೆ ನೀಡಿದ್ದು, ತಮ್ಮ ಅರಿವಿಗೆ ಬಾರದೆ ಪ್ರಮಾದವಾಗಿದೆ. ಬೆಸ್ಕಾಂ ಅಧಿಕಾರಿಗಳ ತನಿಖೆಗೆ ಸಹಕರಿಸುವೆ. ದಂಡ ಪಾವತಿಸುವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT