ಬಿಎಂಟಿಸಿ ಬಸ್ಸು (ಪ್ರಾತಿನಿಧಿಕ ಚಿತ್ರ) 
ರಾಜ್ಯ

ಟಿಕೆಟ್ ರಹಿತ ಪ್ರಯಾಣ: 7 ಲಕ್ಷ ರೂ ದಂಡ ವಸೂಲಿ ಮಾಡಿದ BMTC

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣಿಸುವ ಹಾಗೂ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳುವ ಪುರುಷರನ್ನು ಪತ್ತೆ ಹಚ್ಚಿ ದಂಡ ಹಾಕಿದ್ದು, ಈ ಮೊತ್ತ 7 ಲಕ್ಷ ರೂ ಗಳನ್ನು ದಾಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣಿಸುವ ಹಾಗೂ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳುವ ಪುರುಷರನ್ನು ಪತ್ತೆ ಹಚ್ಚಿ ದಂಡ ಹಾಕಿದ್ದು, ಈ ಮೊತ್ತ 7 ಲಕ್ಷ ರೂ ಗಳನ್ನು ದಾಡಿದೆ ಎಂದು ತಿಳಿದುಬಂದಿದೆ.

ಕಳೆದ ತಿಂಗಳಿನಲ್ಲಿ ಒಟ್ಟು 6,99,325​ ರೂ.ಗಳನ್ನು ದಂಡವಾಗಿ ವಸೂಲಿ ಮಾಡಲಾಗಿದೆ. ಬಸ್ ನಲ್ಲಿ ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 15,165 ಟ್ರಿಪ್‌ಗಳನ್ನು ತಪಾಸಣೆ ನಡೆಸಿವೆ.

ಸುಮಾರು 3350 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ 6,72,125​ರೂ.ದಂಡ ವಸೂಲಿ ಮಾಡಿ, ಸಂಸ್ಥೆಯ ನಿರ್ವಾಹಕರ ವಿರುದ್ಧ 953 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 272 ಪುರುಷ ಪ್ರಯಾಣಿಕರಿಂದ ಒಟ್ಟು 27,200 ರೂ.ದಂಡ ವಿಧಿಸಲಾಗಿರುತ್ತದೆ. ಪ್ರಯಾಣಿಕರು ಬಿಎಂಟಿಸಿ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಸಂಸ್ಥೆಯು ಉತ್ತಮ ಸೇವೆಯನ್ನು ನೀಡಲು ಸಹಾಯವಾಗುತ್ತದೆ. 

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕು ಎಂದು ಪ್ರಯಾಣಿಕರಲ್ಲಿ ಸಂಸ್ಥೆಯು ಮನವಿ ಮಾಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT