ಬಜರಂಗ ದಳ (ಸಾಂದರ್ಭಿಕ ಚಿತ್ರ) 
ರಾಜ್ಯ

ದಕ್ಷಿಣ ಕನ್ನಡ: 5 ಮಂದಿ ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ!

ಕೋಮು ಘರ್ಷಣೆ, ಹಸು ಸಾಗಾಟ, ನೈತಿಕ ಪೊಲೀಸ್‌ಗಿರಿ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಐವರು ಬಜರಂಗದಳದ ಕಾರ್ಯಕರ್ತರಿಗೆ ಅಧಿಕಾರಿಗಳು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣ ಕನ್ನಡ: ಕೋಮು ಘರ್ಷಣೆ, ಹಸು ಸಾಗಾಟ, ನೈತಿಕ ಪೊಲೀಸ್‌ಗಿರಿ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಐವರು ಬಜರಂಗದಳದ ಕಾರ್ಯಕರ್ತರಿಗೆ ಅಧಿಕಾರಿಗಳು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ಅಲ್ಲದೆ, ಅವರನ್ನು ಬೇರೆ ಜಿಲ್ಲೆಗಳಿಗೆ ಏಕೆ ಗಡಿಪಾರು ಮಾಡಬಾರದು ಎಂದು ಸಹ ನೋಟಿಸ್‌ನಲ್ಲಿ ಕೇಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಿನೇಶ್, ಪ್ರಜ್ವಲ್, ಲತೇಶ್ ಗುಂಡ್ಯ, ನಿಶಾಂತ್ ಮತ್ತು ಪ್ರದೀಪ್ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಲತೇಶ್ ಗುಂಡ್ಯ ಅವರು ಪುತ್ತೂರು ಜಿಲ್ಲೆಯ ಬಜರಂಗದಳದ ಸಹ ಸಮಯೋಜಕರಾಗಿದ್ದಾರೆ.

ಪ್ರಜ್ವಲ್ ಮತ್ತು ದಿನೇಶ್ ಬಜರಂಗದಳದಲ್ಲಿ ತಾಲೂಕು ಮಟ್ಟದ ಜವಾಬ್ದಾರಿಯನ್ನು ಹೊಂದಿದ್ದು, ಇನ್ನಿಬ್ಬರು ಬಲಪಂಥೀಯ ಸಂಘಟನೆಯ ಸ್ವಯಂಸೇವಕರಾಗಿದ್ದಾರೆ.

ಅವರನ್ನು ಏಕೆ ವಜಾಗೊಳಿಸಬಾರದು ಎಂದು ಪ್ರಶ್ನಿಸಿ ನವೆಂಬರ್ 22ರಂದು ಪುತ್ತೂರಿನಲ್ಲಿ ಸಹಾಯಕ ಆಯುಕ್ತರ ಮುಂದೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆ, 1953ರ ಸೆಕ್ಷನ್ 55ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಒಮ್ಮೆ ಅವರು ಆಯುಕ್ತರ ಮುಂದೆ ಹಾಜರಾದರೆ, ಅವರ ಮೇಲೆ ಒಂದು ವರ್ಷ ಕಾಲ ಪ್ರವೇಶ ನಿರ್ಬಂಧಿಸುವ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಜುಲೈನಲ್ಲಿ ಮಂಗಳೂರು ನಗರದಿಂದ ಮೂವರು ಬಜರಂಗದಳ ಕಾರ್ಯಕರ್ತರನ್ನು ಹೊರಹಾಕಲಾಗಿತ್ತು. ಆದರೆ, ಬಜರಂಗ ದಳ ಸಂಘಟನೆಯು ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ಪಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT