ಡಾ ಜಿ ಪರಮೇಶ್ವರ್ 
ರಾಜ್ಯ

'ನಾನು ವಿಡಿಯೊ ನೋಡಿಲ್ಲ, ನನಗೆ ಗೊತ್ತಿಲ್ಲ, ನಾನೇಕೆ ಪ್ರತಿಕ್ರಿಯಿಸಲಿ': ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಅವರು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ವೈರಲ್ ಆಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಉಂಟಾಗಿದೆ ಎಂದು ವಿವಾದ ಎದ್ದಿದ್ದು, ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಅವರು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ವೈರಲ್ ಆಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಉಂಟಾಗಿದೆ ಎಂದು ವಿವಾದ ಎದ್ದಿದ್ದು, ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ.

ನಾನು ವಿಡಿಯೊ ನೋಡಿಲ್ಲ, ನನಗೆ ಗೊತ್ತಿಲ್ಲ, ನಾನೇಕೆ ಪ್ರತಿಕ್ರಿಯಿಸಿಲ್ಲ, ಗೊತ್ತಿಲ್ಲದಿರುವ ವಿಷಯ ಬಗ್ಗೆ ಮಾತನಾಡುವುದಿಲ್ಲ ಎಂದರು.
ಸರ್ಕಾರದಲ್ಲಿ ಪ್ರತಿನಿತ್ಯ ನೂರೆಂಟು ವಿಚಾರಗಳು, ಮಾತುಗಳು ನಡೆಯುತ್ತಿವೆ. ಆಡಳಿತದಲ್ಲಿ ಹತ್ತಾರು ವಿಷಯಗಳಿರುತ್ತವೆ. ಅವರು ಯಾವುದಾದರೂ ವಿಚಾರ ಬಗ್ಗೆ ಮಾತನಾಡಿರಬಹುದು, ವಿರೋಧ ಪಕ್ಷದವರು ದಿನನಿತ್ಯ ಆರೋಪ ಮಾಡುತ್ತಾರೆ. ಅವರ ಮಾತಿಗೆಲ್ಲಾ ಪ್ರತಿಕ್ರಿಯೆ ಕೊಟ್ಟುಕೊಂಡು ಕೂರಲು ಆಗುತ್ತದೆಯೇ, ಆಡಳಿತ ನಡೆಸಲು ಜನರು ನಮಗೆ ಅವಕಾಶ ಕೊಟ್ಟಿದ್ದಾರೆ. ಆಡಳಿತ ಮಾಡುತ್ತಿದ್ದೇವೆ, ಜನರಿಗೆ ನೀಡಿದ ಭರವಸೆಗಳನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ, ವಿರೋಧ ಪಕ್ಷದವರು ಅವರ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. 

ಜೆಡಿಎಸ್ ನಿಂದ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಸಚಿವ ರಾಜಣ್ಣ ಅವರು ಸಿಟ್ಟುಗೊಂಡಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರ ಅಧ್ಯಕ್ಷರು ಹೈಕಮಾಂಡ್ ಅನುಮತಿ ತೆಗೆದುಕೊಂಡೇ ಮಾಡಿರುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ನಮ್ಮ ಜಿಲ್ಲೆಯ ವಿಷಯದಲ್ಲಿ ನಾವೆಲ್ಲರೂ ಅಭಿಪ್ರಾಯ ತಿಳಿಸುತ್ತೇವೆ. ಆಮೇಲೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಕೃಷ್ಣ ಭೈರೇಗೌಡರನ್ನು ಈಗ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವವರ ಪಟ್ಟಿ ನೀಡುವ ತಂಡದ ಮುಖ್ಯಸ್ಥರನ್ನಾಗಿ ಮಾಡುತ್ತಾರೆ. 

ಅವರು ನೀಡಿದ ಹೆಸರುಗಳನ್ನು ಕೆಪಿಸಿಸಿ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ರಾಜಣ್ಣ ಅವರು ನನಗೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದರೆ ಸ್ಪರ್ಧಿಸುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT