ಯುವತಿ ಜತೆ ರಂಗನಾಥ್ 
ರಾಜ್ಯ

ಬಳ್ಳಾರಿ ಬಿಜೆಪಿ ಸಂಸದನ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಎಫ್ಐಆರ್ ದಾಖಲು

ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರು ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಕೇಳಿಬಂದಿದೆ.

ಬೆಂಗಳೂರು: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರು ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಕೇಳಿಬಂದಿದೆ.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಅವರ ವಿರುದ್ಧ ಬೆಂಗಳೂರು ಮೂಲದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ಇದೀಗ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್​ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಇಬ್ಬರಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಬರುವಂತೆ ರಂಗನಾಥ್ ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಯುವತಿಗೆ ಸೂಕ್ತ ದಾಖಲೆ ಸಮೇತ ಠಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ರಂಗನಾಥ್ ಅವರು ಸಹ ಯುವತಿ ವಿರುದ್ಧ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. 

ನನ್ನ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಯುವತಿ ನನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದು, 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವುದಾಗಿ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ವಿಜಯನಗರ ಪೊಲೀಸರು ಸಂತ್ರಸ್ಥ ಯುವತಿ ಮತ್ತು ಮತ್ತೊಬ್ಬ ವ್ಯಕ್ತಿ ಶ್ರೀನಿವಾಸ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ಸಂಪೂರ್ಣ ಕುಸಿಯುತ್ತಿದೆ': ಹಾರ್ಮುಜ್ ತೆರೆಯುವಂತೆ ಟೆಹ್ರಾನ್ ಬೇಡಿಕೊಳ್ಳುತ್ತಿದೆ: ಟ್ರಂಪ್

ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ: ಹಣಕ್ಕಾಗಿ ಹೂತಿಟ್ಟ ಸಹೋದರಿ ಶವವನ್ನೇ ಬ್ಯಾಂಕ್​ಗೆ ಹೊತ್ತು ತಂದ ವ್ಯಕ್ತಿ!

IPL 2026: ಜೈಸ್ವಾಲ್, ಫೆರೀರಾ ಅಬ್ಬರಕ್ಕೆ ಪಂಜಾಬ್ ತತ್ತರ; PBKS ವಿರುದ್ಧ RR ಭರ್ಜರಿ ಗೆಲುವು

CM ಸಿದ್ದರಾಮಯ್ಯ ಪದತ್ಯಾಗಕ್ಕೂ ಸಿದ್ಧರಾಗಿದ್ದಾರೆ: ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ; Video

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: ಮುಂದಿನ ತಿಂಗಳು ಭಾರತಕ್ಕೆ ಬರಲಿದೆ S-400 ಕ್ಷಿಪಣಿ 4ನೇ ಘಟಕ!

SCROLL FOR NEXT